ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ಬಗ್ಗೆ ಅವಹೇಳನಕಾರಿ ವಿಡಿಯೋ ಮತ್ತು ಬರಹವನ್ನು ಪೋಸ್ಟ್ ಮಾಡಿದ ಅನಿತಾ ಕಾಸರಗೋಡು ಎಂಬಾಕೆಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಬಿರುವೆರ್ ಕುಡ್ಲ (ರಿ) ಮಂಗಳೂರು ಘಟಕದ ಅಧ್ಯಕ್ಷ ರಾಕೇಶ್ ಎಂಬವರು ಬರ್ಕೆ ಠಾಣೆಗೆ ದೂರು ನೀಡಿದ್ದಾರೆ.
ಸೋಮವಾರ ಸಂಜೆ ತಾನು ಬಿಜೈ ಸರಕಾರಿ ಬಸ್ ನಿಲ್ದಾಣದಲ್ಲಿ ಫೇಸ್‌ಬುಕ್ ವೀಕ್ಷಿಸುತ್ತಿದ್ದಾಗ ಅನಿತಾ ಕಾಸರಗೋಡು ಎಂಬಾಕೆ ಹಾಕಲಾದ ಪೋಸ್ಟ್‌ನಲ್ಲಿ ಧರ್ಮ-ವರ್ಗಗಳ ಮಧ್ಯೆ ಕೋಮುಭಾವನೆ ಹುಟ್ಟು ಹಾಕಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರಚೋದನೆ ನೀಡಿರುವುದಾಗಿ ರಾಕೇಶ್ ದೂರಿನಲ್ಲಿ ತಿಳಿಸಿದ್ದಾರೆ. ಅದರಂತೆ ಬರ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.