ಸಜಿಪಮೂಡ ಗ್ರಾಮದ ಕೊಳಕೆ-ಪಂಜಾಜೆ ಎಂಬಲ್ಲಿ ನಡೆದಿದೆ ಎನ್ನಲಾದ ಅಕ್ರಮ ಗೋಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ನಗರ ಠಾಣೆಯ ಪೊಲೀಸರು ಆರೋಪಿಯ ಮನೆ ಮತ್ತು ದನದ ಕೊಟ್ಟಿಗೆಯನ್ನು ಜಪ್ತಿ ಮಾಡಿದ್ದಾರೆ.
ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020ರ ಸೆಕ್ಷನ್ 4, 7 ಮತ್ತು 12ರ ಅಡಿಯಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಸಂಖ್ಯೆ 68/2026ರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ.ಆರೋಪಿ ಮುಸ್ತಫಾ ಎಂಬುವವರ ಮನೆ ಮತ್ತು ದನದ ಕೊಟ್ಟಿಗೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದ್ದು, ಪೊಲೀಸರು ಸದರಿ ಸ್ಥಳವನ್ನು ಜಪ್ತಿ ಮಾಡಿದ್ದಾರೆ. ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020ರ ಸೆಕ್ಷನ್ 8(1)ರ ಅಡಿಯಲ್ಲಿ ಈ ಕಾನೂನು ಕ್ರಮ ಜರುಗಿಸಲಾಗಿದೆ.ಜಪ್ತಿ ಪ್ರಕ್ರಿಯೆಯ ನಂತರ, ಮುಂದಿನ ಕಾನೂನು ಕ್ರಮಕ್ಕಾಗಿ ಪೊಲೀಸರು ಮಂಗಳೂರು ಉಪವಿಭಾಗೀಯ ದಂಡಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸಿದ್ದಾರೆ.