ಮಂಗಳೂರು: ಪ್ರತಿಷ್ಠಿತ ಮಂಗಳೂರು ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷರಾಗಿ ಜಿಲ್ಲಾ ನೋಟರಿ ವಕೀಲರಾದ ಪ್ರವೀಣ್ ಕುಮಾರ್ ಅದ್ಯಪಾಡಿ ಅತ್ಯಧಿಕ ಮತಗಳಿಂದ ಜಯ ಗಳಿಸಿ ಆಯ್ಕೆ ಯಾಗಿದ್ದಾರೆ.
ಕೇಂದ್ರ ಸರಕಾರದ ಜಿಲ್ಲಾ ನೋಟರಿ ವಕೀಲರಾಗಿರುವ ಪ್ರವೀಣ್ ಕುಮಾರ್ ಅದ್ಯಪಾಡಿ ಇವರು ಅದ್ಯಪಾಡಿ ಶ್ರೀ ಆದಿನಾಥೇಶ್ವರ ಭಜನಾ ಮಂಡಳಿಯ ಹಿರಿಯ ಸದಸ್ಯರೂ, ಅದ್ಯಪಾಡಿ ಸರಕಾರಿ ಪ್ರೌಢ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರು, ಬಜಪೆ ಜನ ಜಾಗೃತಿ ವೇದಿಕೆಯ ಅಧ್ಯಕ್ಷರಾಗಿದ್ದಾರೆ. ಇದೀಗ ಪ್ರತಿಷ್ಠಿತ ಮಂಗಳೂರು ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾದವರಿಗೆ ಹಿತೈಷಿಗಳು, ಸ್ನೇಹಿತರು, ವಕೀಲರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. 


