ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ 4,399 ದಿನಗಳ ಯಶಸ್ವಿ ಆಡಳಿತ ಹಾಗೂ ದೇಶದ ದೀರ್ಘಾವಧಿಯ ಚುನಾಯಿತ ಪ್ರಧಾನಿ ಎಂಬ ಮೈಲಿಗಲ್ಲು ಸ್ಥಾಪನೆಯಾದ ಹಿನ್ನೆಲೆಯಲ್ಲಿ, ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಸಹಿತ ದೇಶವನ್ನು ಮುನ್ನಡೆಸಲು ಇನ್ನಷ್ಟು ಶಕ್ತಿ ನೀಡಲಿ ಎಂಬ ಪ್ರಾರ್ಥನೆಯೊಂದಿಗೆ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಇತಿಹಾಸ ಪ್ರಸಿದ್ಧ ಕದ್ರಿ ದೇವಸ್ಥಾನದಲ್ಲಿ ವಿಶೇಷ ರಂಗ ಪೂಜೆ ನಡೆಯಿತು.

ಈ ವೇಳೆ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವರ್, ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ, ಪ್ರಮುಖರಾದ ಸುಧೀರ್ ಶೆಟ್ಟಿ ಕಣ್ಣೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

