ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲ ಕಡೆಗಳಲ್ಲಿ ರಸ್ತೆ ವಿಭಜಕಗಳ ಮೇಲೆ ಆಳವಡಿಸಿರುವ ಫ್ಲೆಕ್ಸ್, ಬ್ಯಾನರ್ಗಳನ್ನು ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಸೂಚನೆ ನೀಡಿದ್ದಾರೆ.

ಮಂಗಳೂರು ಮಹಾನಗರಪಾಲಿಕೆ, ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತಿ ವ್ಯಾಪ್ತಿಯ ರಸ್ತೆಗಳ ವಿಭಜಕಗಳ ಮೇಲೆ ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳನ್ನು ಆಳವಡಿಸಲಾಗಿದೆ. ಇದರಿಂದ ರಸ್ತೆ ದಾಡುವವರು, ವಾಹನ ಸವಾರರಿಗೆ ಸಮಸ್ಯೆಯಾಗಿದೆ. ಕೆಲ ಕಡೆಗಳಲ್ಲಿ ಅಪಘಾತಕ್ಕೂ ಕಾರಣವಾಗುತ್ತಿದೆ. ಈ ಬಗ್ಗೆ ಈಗಾಗಲೇ ಸಾಕಷ್ಟು ದೂರು ಬಂದಿದ್ದು, ರಸ್ತೆ ಸುರಕ್ಷಾ ಸಮಿತಿ ಸಭೆಯಲ್ಲೂ ಚರ್ಚೆ ನಡೆದಿದೆ. ತಕ್ಷಣ ಎಲ್ಲ ಫ್ಲೆಕ್ಸ್, ಬ್ಯಾನರ್ಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಕೈಗೆಳ್ಳಲಾಗುವುದು ಎಂದು ತಿಳಿಸಿದ್ದಾರೆ.

