ಮಡ್ಯಾರ್ ;ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯ 11ನೇ ವಾರ್ಡಿನ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿ ಇದೀಗ ಸಂಪೂರ್ಣಗೊoಡಿದ್ದು, ಈ ಮೂಲಕ ಹಲವು ದಿನಗಳಿಂದ ಚರ್ಚೆಗೆ ಕಾರಣವಾಗಿದ್ದ ಸಮಸ್ಯೆಗೆ ತೆರೆ ಬಿದ್ದಿದೆ.
ಈ ರಸ್ತೆ ಕಾಮಗಾರಿ ಮಧ್ಯದಲ್ಲೇ ನಿಂತುಹೋಗಿದ್ದ ಕಾರಣ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ವಾರ್ಡಿನ ಕೌನ್ಸಿಲರ್ ಹರೀಶ್‌ರಾವ್ ಮಡ್ಯಾರ್ ಅವರು ನಿರಂತರ ಪ್ರಯತ್ನ ನಡೆಸಿ, ಸಚಿವರಾದ ಯು.ಟಿ. ಖಾದರ್ ಅವರ ಸಹಕಾರದೊಂದಿಗೆ ಕಾಮಗಾರಿಯನ್ನು ಪೂರ್ಣಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದ ಹರೀಶ್‌ರಾವ್ ಮಡ್ಯಾರ್ ಅವರು ಇತ್ತೀಚೆಗೆ ನಡೆದ ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಬಾವಿಗಿಳಿದು ಪ್ರತಿಭಟನೆ ನಡೆಸಿ ಅಧಿಕಾರಿಗಳ ಗಮನ ಸೆಳೆದಿದ್ದರು. ಇದೀಗ ಅವರ ಮುತುವರ್ಜಿಯಲ್ಲಿ ಅರ್ಧಕ್ಕೆ ನಿಂತಿದ್ದ ತನ್ನ ವಾರ್ಡಿನ ಜನರಿಗೆ ಅವಶ್ಯಕತೆಯಿದ್ದ ರಸ್ತೆಯನ್ನು ಸಂಪೂರ್ಣವಾಗಿ ಕಾಂಕ್ರೀಟಿಕರಣಗೊಳಿಸುವ ಮೂಲಕ ಜನಮೆಚ್ಚುಗೆ ಗಳಿಸಿಕೊಂಡಿದ್ದಾರೆ.
ಆ ಮೂಲಕ ಜನರ ಬಹುಕಾಲದ ಬೇಡಿಕೆ ಈಡೇರಿದೆ.
