Site icon Ullalavani

ಜನಸಂಘದ ಹಿರಿಯ ಕಾರ್ಯಕರ್ತ ವಿಠಲ್ ಕೊಟ್ಟಾರಿ ನಿಧನ..!!


ಕುತ್ತಾರು, ಜೂ. 12: ಜನಸಂಘ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ಮತ್ತು ನಿಷ್ಠಾವಂತ ಕಾರ್ಯಕರ್ತರಾದ ವಿಠಲ್ ಕೊಟ್ಟಾರಿ (68) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾದರು.


ಸಂತೋಷನಗರ, ಮುನ್ನೂರು ನಿವಾಸಿಯಾಗಿದ್ದ ಅವರು ಜನಸಂಘದ ಕಾಲದಿಂದಲೇ ಸಂಘಟನೆಯಲ್ಲಿ ಸಕ್ರಿಯರಾಗಿದ್ದು, ಬಳಿಕ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದ ಅವರು ಮುನ್ನೂರಿನಲ್ಲಿ ಫರ್ನಿಚರ್ ಅಂಗಡಿಯನ್ನು ನಡೆಸುತ್ತಿದ್ದರು.
ಮುನ್ನೂರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿಯೂ ಸ್ಪರ್ಧಿಸಿದ್ದ ಅವರು ಸಾಮಾಜಿಕ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ನಿತ್ಯಾನಂದ ಫ್ರೆಂಡ್ಸ್ ಕ್ಲಬ್‌ನಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು. ಸರಳ, ಸಜ್ಜನ ಹಾಗೂ ಸಂಘಟನೆಯ ಬೆಳವಣಿಗೆಗಾಗಿ ಶ್ರಮಿಸಿದ ಕಾರ್ಯಕರ್ತರಾಗಿ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಕ್ಷೇತ್ರಾಧ್ಯಕ್ಷ ಜಗದೀಶ್ ಆಳ್ವ ಕುವೆಟ್ಟಬೈಲು, ಮುನ್ನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸತೀಶ್ ಪೂಜಾರಿ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Exit mobile version