ಕುಂಪಲ: ಕುಂಪಲ ಶ್ರೀ ಬಾಲಕೃಷ್ಣ ಮಂದಿರ ಸಂಚಾಲಿತ ಶ್ರೀ ಬಾಲಕೃಷ್ಣ ಮಹಿಳಾ ಸೇವಾ ಸಮಿತಿಯ 2026-27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಸಮಿತಿಯ ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಜಯಚಂದ್ರ ಆಯ್ಕೆಯಾಗಿದ್ದು, ಪ್ರಧಾನ ಸಂಚಾಲಕಿಯಾಗಿ ಸುನಿತಾ ರಾಜ್, ಪ್ರಧಾನ ಕಾರ್ಯದರ್ಶಿಯಾಗಿ ಶುಭ ಹೆಚ್. ಶೆಟ್ಟಿ ಹಾಗೂ ಕೋಶಾಧಿಕಾರಿಯಾಗಿ ಸುಜಾತ ಡಿ. ಶೆಟ್ಟಿ ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ದೇವಸ್ಥಾನದ ಆಡಳಿತ ಮಂಡಳಿ, ಸದಸ್ಯರು ಹಾಗೂ ಭಕ್ತಾದಿಗಳು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದು, ಸಮಿತಿಯ ಮುಂದಿನ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿದ್ದಾರೆ.

