Site icon Ullalavani

ಜೂನ್ 14ರಂದು ಬೆಂಗಳೂರಿನಲ್ಲಿ ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್

ಬೆಂಗಳೂರು, ಜೂ.12: ಪ್ರಕೃತಿ ಸಂರಕ್ಷಣೆ, ಯುವಜನತೆ ಹಾಗೂ ದೇಶದ ಆರ್ಥಿಕತೆಯಲ್ಲಿ ಕೃಷಿಯ ಮಹತ್ವವನ್ನು ಜನರಿಗೆ ಮನವರಿಕೆ ಮಾಡುವ ಉದ್ದೇಶದಿಂದ ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ ಕಾರ್ಯಕ್ರಮವು ಜೂನ್ 14ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿದೆ.

ವಿದ್ಯಾರ್ಥಿಗಳು, ರೈತರು ಹಾಗೂ ಕೃಷಿ ಕ್ಷೇತ್ರದ ತಜ್ಞರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಈ ವಿಶೇಷ ಕಾರ್ಯಕ್ರಮವು ಕೃಷಿಯ ಮಹತ್ವ, ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯ ಕುರಿತು ಜಾಗೃತಿ ಮೂಡಿಸುವ ಗುರಿ ಹೊಂದಿದೆ.

ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದ ವಿವಿಧ ಸಾಧಕರು, ತಜ್ಞರು ಹಾಗೂ ಯುವಜನರು ಭಾಗವಹಿಸಿ ತಮ್ಮ ಅನುಭವ ಮತ್ತು ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ. ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮೂಡಿಸುವ ಜೊತೆಗೆ ರೈತ ಸಮುದಾಯದ ಕೊಡುಗೆಯನ್ನು ಗೌರವಿಸುವ ನಿಟ್ಟಿನಲ್ಲಿ ಈ ವಾಕಥಾನ್ ಆಯೋಜಿಸಲಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ರೈತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Exit mobile version