ತಲಪಾಡಿ, ಜೂ.13: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿನಯ್ ನಾಯ್ಕ್ ಅವರ ಮಾತೃಶ್ರೀ ಸರ್ವಾಣಿ ಟಿ. ನಾಯ್ಕ್ (94) ಅವರು ತಮ್ಮ ಸ್ವಗೃಹದಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದರು.
ಮೃತರು ಇಬ್ಬರು ಪುತ್ರರು, ಒಬ್ಬ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ತಲಪಾಡಿಯಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದ್ದು, ಮಧ್ಯಾಹ್ನ ಸುಮಾರು 12 ಗಂಟೆಗೆ ನಿವಾಸದ ಸಮೀಪ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಮೃತರ ನಿಧನಕ್ಕೆ ಬಂಧುಗಳು, ಸ್ನೇಹಿತರು ಹಾಗೂ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.