ಉಳ್ಳಾಲ: ಅಪರಿಚಿತ ಗಂಡಸಿನ ಮೃತದೇಹವು ಉಳ್ಳಾಲ ಹೋಯಿಗೆ ಸಮೀಪದ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿದೆ.
ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ (ಯುಡಿಆರ್) ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.
ಮೃತ ವ್ಯಕ್ತಿಯ ವಾರಸುದಾರರು ಅಥವಾ ಸಂಬಂಧಿಕರ ಬಗ್ಗೆ ಮಾಹಿತಿ ಇರುವವರು ಉಳ್ಳಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಸಂಪರ್ಕ ಸಂಖ್ಯೆ: 9480802342, 9480802315.