ತೊಕ್ಕೊಟ್ಟು: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಪ್ರಜಾಪಿತ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯ ಹಾಗೂ ಶಾರದಾ ಯೋಗ ಮತ್ತು ನ್ಯಾಚುರೋಪಥಿ ಮೆಡಿಕಲ್ ಕಾಲೇಜು, ಮಂಗಳೂರು ಇವರ ಸಹಯೋಗದಲ್ಲಿ ನಾಲ್ಕು ದಿನಗಳ ಯೋಗ ಶಿಬಿರವನ್ನು ಆಯೋಜಿಸಲಾಗಿದೆ.
“ಸ್ವಲ್ಪ ಸಮಯ ನಮಗಾಗಿ” ಎಂಬ ಧ್ಯೇಯದೊಂದಿಗೆ ನಡೆಯಲಿರುವ ಈ ಯೋಗ ಶಿಬಿರವು ಜೂನ್ 18 ರಿಂದ ಜೂನ್ 21ರವರೆಗೆ ಪ್ರತಿದಿನ ಸಂಜೆ 6.00 ರಿಂದ 7.00 ಗಂಟೆಯವರೆಗೆ ನಡೆಯಲಿದೆ.
ಕಾರ್ಯಕ್ರಮವು ತೊಕ್ಕೊಟ್ಟಿನ ಗಣಪತಿ ದೇವಸ್ಥಾನದ ಸಮೀಪದ ಓವರ್‌ಬ್ರಿಡ್ಜ್ ಹತ್ತಿರ ಇರುವ ಪ್ರಜಾಪಿತ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದ್ದು, ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.
ಯೋಗಾಭ್ಯಾಸದಲ್ಲಿ ಭಾಗವಹಿಸುವವರು ತಮ್ಮದೇ ಹಾಸುವ ವ್ಯವಸ್ಥೆಯನ್ನು ತರಬೇಕೆಂದು ಸಂಘಟಕರು ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಹೆಸರು ನೋಂದಣಿಗಾಗಿ 9591889409 ಮತ್ತು 9964996008 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.