ಮಂಗಳೂರು, ಜೂನ್ 18: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಕಾರ್ಯಕರ್ತರಿಗೆ ಅರಿವು ಮೂಡಿಸುವ ಉದ್ದೇಶದಿಂದ ಎಸ್.ಐ.ಆರ್ ಕಾರ್ಯಾಗಾರವನ್ನು ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಯಿತು.


ಕಾರ್ಯಾಗಾರದಲ್ಲಿ ಮಾತನಾಡಿದ ಪದ್ಮನಾಥ್ ಆರ್ ಪೂಜಾರಿ ರವರು ಪ್ರಜಾಪ್ರಭುತ್ವದ ಬಲವರ್ಧನೆಗೆ ಮತದಾರರ ಪಟ್ಟಿಯ ನಿಖರತೆ ಅತ್ಯಂತ ಮುಖ್ಯವಾಗಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಮತದಾರರ ನೋಂದಣಿ, ತಿದ್ದುಪಡಿ, ಹೆಸರು ಸೇರ್ಪಡೆ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತಂತೆ ಕಾರ್ಯಕರ್ತರಿಗೆ ಸಮಗ್ರ ಮಾಹಿತಿ ನೀಡಲಾಯಿತು.
ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವಕರು ಚುನಾವಣಾ ಪ್ರಕ್ರಿಯೆ ಹಾಗೂ ಮತದಾರರ ಹಕ್ಕುಗಳ ಬಗ್ಗೆ ಹೆಚ್ಚಿನ ಅರಿವು ಹೊಂದಿರುವುದು ಅಗತ್ಯವಾಗಿದೆ. ಎಸ್.ಐ.ಆರ್ ಪ್ರಕ್ರಿಯೆಯ ಕುರಿತು ಮನೆಮನೆಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಕೈಗೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಮಾನಾಥ ರೈ, ಪದ್ಮರಾಜ್ ಆರ್. ಪೂಜಾರಿ, ನಾಸಿರ್ ಸಾಮಣಿಗೆ, ಬಶೀರ್ ಕಣ್ಣೂರು , ದೀಕ್ಷಿತ್ ಅತ್ತಾವರ, ಆಸಿಫ್ ಬಜಾಲ್ , ರೂಪೇಶ್ ರೈ, ಪ್ರಜ್ವಲ್ ಶೆಟ್ಟಿ, ಮಿತೇಶ್ ಡಿಸೋಜಾ, ಫೈಝಲ್ ಕಡಬ , ವೆಲ್ವಿನ್ ಜೈಸನ್ ಕಾಸ್ಟಲೀನೊ ,ಮಹೇಶ್ ಗೌಡ,ಪೃಥ್ವಿರಾಜ್ ಪೂಜಾರಿ ಸೇರಿದಂತೆ ಹಲವು ಮುಖಂಡರು ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಕಾರ್ಯಾಗಾರವು ಸಂವಾದಾತ್ಮಕವಾಗಿ ನಡೆಯಿದ್ದು, ಎಸ್.ಐ.ಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರ ನೀಡಿ ಅಗತ್ಯ ಮಾರ್ಗದರ್ಶನ ಒದಗಿಸಲಾಯಿತು. ಜಿಲ್ಲೆಯಾದ್ಯಂತ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಮತದಾನದ ಜಾಗೃತಿ ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸುವ ಸಂಕಲ್ಪದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು

