ಉಡುಪಿ, ಜೂ. 18 : ಎಕ್ಸ್ಪ್ರೆಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66 ರ ಸಾಯಿ ಸರ್ವಿಸ್ ಸ್ಟೇಷನ್ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.

ವರದಿಗಳ ಪ್ರಕಾರ, ಕಾಪು ಸರ್ವಿಸ್ ರಸ್ತೆ ಮತ್ತು ಹೆದ್ದಾರಿಯ ಜಂಕ್ಷನ್ನಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಎಕ್ಸ್ಪ್ರೆಸ್ ಬಸ್, ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಚಲಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.ಗಾಯಗೊಂಡ ಸ್ಕೂಟಿ ಸವಾರನನ್ನು ಮಂಗಳೂರಿನ ಸಸಿಹಿತ್ಲು ಮೂಲದ ಗಣೇಶ್ ಪಾತ್ರಿ ಎಂದು ಗುರುತಿಸಲಾಗಿದ್ದು, ಪ್ರಸ್ತುತ ಕಾಪುವಿನಲ್ಲಿ ವಾಸಿಸುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸವಾರನನ್ನು ಸ್ಥಳೀಯ ನಿವಾಸಿಗಳು ಆಂಬ್ಯುಲೆನ್ಸ್ ಮೂಲಕ ಉಡುಪಿಯ ಆಸ್ಪತ್ರೆಗೆ ಸಾಗಿಸಿದರು.ಸ್ಕೂಟಿಗೆ ಡಿಕ್ಕಿ ಹೊಡೆದ ನಂತರ, ಬಸ್ ಡಿವೈಡರ್ ಮೇಲೆ ಹೋಗಿ ನಿಂತಿದ್ದು, ದೊಡ್ಡ ಅನಾಹುತವೊಂದನ್ನು ಸ್ವಲ್ಪದರಲ್ಲೇ ತಪ್ಪಿದಂತಾಗಿದೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

