ಉಳ್ಳಾಲ, ಜೂನ್ 23: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಖಾಜಿ ಹಾಗೂ ಗೌರವಾನ್ವಿತ ಧಾರ್ಮಿಕ ಮುಖಂಡರಾದ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನಕ್ಕೆ ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ಅಧ್ಯಕ್ಷರು ಮತ್ತು ಸದಸ್ಯರು ಆಳವಾದ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಮುದಾಯದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಮಹತ್ವದ ಪಾತ್ರ ವಹಿಸಿದ್ದು, ಸಮಾಜದ ಮಾರ್ಗದರ್ಶಕರಾಗಿ ಅಪಾರ ಗೌರವ ಗಳಿಸಿದ್ದರು. ಅವರ ಅಗಲಿಕೆಯಿಂದ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಸಂತಾಪ ಸಂದೇಶದಲ್ಲಿ ತಿಳಿಸಲಾಗಿದೆ.
ಸರ್ವಶಕ್ತನಾದ ಅಲ್ಲಾಹನು ಅವರಿಗೆ ಮಗ್ಫಿರತ್ ಅನುಗ್ರಹಿಸಿ ಜನ್ನಾತುಲ್ ಫಿರ್ದೌಸ್‌ನಲ್ಲಿ ಉನ್ನತ ಸ್ಥಾನವನ್ನು ನೀಡಲಿ ಹಾಗೂ ಅವರ ಕುಟುಂಬಸ್ಥರು, ಬಂಧುಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ಅಧ್ಯಕ್ಷರು ಮತ್ತು ಸದಸ್ಯರು ಪ್ರಾರ್ಥಿಸಿದ್ದಾರೆ.

