Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಮಂಗಳೂರು: ಹೊಸ ಪಡಿತರ ಚೀಟಿ ವಿತರಣೆಗೆ ತಕ್ಷಣ ಅವಕಾಶ ಕಲ್ಪಿಸುವಂತೆ ಜನತಾದಳ ಪಕ್ಷದ ನಿಯೋಗ ಡಿಸಿಗೆ ಮನವಿ

UllalaVaniBy UllalaVaniJune 24, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು, ಜೂ. 24 : ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಹೊಸ ಪಡಿತರ ಚೀಟಿ (ರೇಷನ್ ಕಾರ್ಡ್) ವಿತರಣೆಯ ಪ್ರಕ್ರಿಯೆ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನಿಯೋಗವು ಜಿಲ್ಲಾಧಿಕಾರಿಗಳ ಮೂಲಕ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಿಗೆ ಮನವಿ ಸಲ್ಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಮನವಿಯಲ್ಲಿ, ರಾಜ್ಯದಾದ್ಯಂತ ಸಾವಿರಾರು ಅರ್ಹ ಕುಟುಂಬಗಳು ಹೊಸ ಪಡಿತರ ಚೀಟಿ ಪಡೆಯಲು ಎರಡು ವರ್ಷಗಳಿಂದ ಕಾಯುತ್ತಿರುವುದರಿಂದ ಸರ್ಕಾರದ ವಿವಿಧ ಜನಪರ ಯೋಜನೆಗಳು ಹಾಗೂ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ವಿಚಾರವನ್ನು ಗಂಭೀರವಾಗಿ ಪ್ರಸ್ತಾಪಿಸಲಾಯಿತು. ಹೊಸದಾಗಿ ವಿವಾಹವಾದ ದಂಪತಿಗಳು, ಪ್ರತ್ಯೇಕ ಕುಟುಂಬವಾಗಿ ಜೀವನ ಆರಂಭಿಸಿರುವವರು, ಬಾಡಿಗೆ ಮನೆಗಳಲ್ಲಿ ವಾಸಿಸುವವರು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳು ಸೇರಿದಂತೆ ಅನೇಕ ನಾಗರಿಕರು ಪಡಿತರ ಚೀಟಿ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದರು.ಪಡಿತರ ಚೀಟಿ ಕೇವಲ ಆಹಾರ ಧಾನ್ಯಗಳ ವಿತರಣೆಗೆ ಮಾತ್ರ ಸೀಮಿತವಾಗಿಲ್ಲ. ಆರೋಗ್ಯ ಸೇವೆಗಳು, ವಿದ್ಯಾರ್ಥಿವೇತನ, ವಸತಿ ಯೋಜನೆಗಳು, ಸಾಮಾಜಿಕ ಭದ್ರತಾ ಯೋಜನೆಗಳು ಹಾಗೂ ಸರ್ಕಾರದ ಅನೇಕ ಸೌಲಭ್ಯಗಳನ್ನು ಪಡೆಯಲು ಇದು ಪ್ರಮುಖ ದಾಖಲೆಯಾಗಿದೆ. ಹೀಗಾಗಿ ಹೊಸ ಪಡಿತರ ಚೀಟಿ ವಿತರಣೆಯಲ್ಲಿನ ವಿಳಂಬದಿಂದ ಅನೇಕ ಕುಟುಂಬಗಳು ತಮ್ಮ ಹಕ್ಕುಗಳು ಮತ್ತು ಸೌಲಭ್ಯಗಳಿಂದ ವಂಚಿತರಾಗುವಂತಾಗಿದೆ ಎಂದು ನಿಯೋಗ ಆತಂಕ ವ್ಯಕ್ತಪಡಿಸಿದರು.ಸರ್ಕಾರವು ತಕ್ಷಣವೇ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪುನರಾರಂಭಿಸಬೇಕು, ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿ ಚೀಟಿಗಳನ್ನು ವಿತರಿಸಬೇಕು, ಹೊಸದಾಗಿ ವಿವಾಹವಾದ ದಂಪತಿಗಳು ಹಾಗೂ ಪ್ರತ್ಯೇಕ ಕುಟುಂಬಗಳಿಗೆ ಆದ್ಯತೆ ನೀಡಬೇಕು, ಅರ್ಜಿ ಮತ್ತು ಮಂಜೂರಾತಿ ಪ್ರಕ್ರಿಯೆಯನ್ನು ಸರಳೀಕರಿಸಬೇಕು ಹಾಗೂ ಪಡಿತರ ಚೀಟಿ ವಿತರಣೆಗೆ ಸಂಬಂಧಿಸಿದಂತೆ ಸ್ಪಷ್ಟ
ಕಾಲಮಿತಿಯನ್ನು ಪ್ರಕಟಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.ಇದೇ ವೇಳೆ ಸಾರ್ವಜನಿಕರು ಅನಗತ್ಯವಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಆನ್‌ಲೈನ್ ಹಾಗೂ ನೇರ ಸೇವಾ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಿ ಜನಸ್ನೇಹಿ ಆಡಳಿತ ಒದಗಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಲಾಯಿತು.
ಜನಸಾಮಾನ್ಯರ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಅರ್ಹ ಕುಟುಂಬಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹೊಸ ಪಡಿತರ ಚೀಟಿ ವಿತರಣೆಗೆ ತಕ್ಷಣ ಅವಕಾಶ ಕಲ್ಪಿಸಬೇಕು ಎಂದು ಜೆಡಿಎಸ್ ನಾಯಕರು ಒತ್ತಾಯಿಸಿದರು.ಮನವಿ ಸಲ್ಲಿಸುವ ಸಂದರ್ಭದಲ್ಲಿ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ವಸಂತ ಪೂಜಾರಿ , ಶಶಿರಾಜ್ ಶೆಟ್ಟಿ ಕೊಳಂಬೆ ,ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು , ಮೀನುಗಾರ ಘಟಕದ ರಾಜ್ಯದ್ಯಕ್ಷ ರತ್ನಾಕರ ಸುವರ್ಣ, ಮಹಿಳಾ ಜಿಲ್ಲಾಧ್ಯಕ್ಷೆ ರಮೀಝ್ ನಾಸೀರ್ , ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಅಜೀಜ್ ಮಲಾರ್ , ಜಿಲ್ಲಾ ಕಾರ್ಯದರ್ಶಿ ಪ್ರಿಯಾ ಸಾಲಿಯಾನ್ , ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಜೈನ್, ವಿನ್ಸೇಂಟ್ ಡಿಸೋಜ , ಮಹಿಳಾ ಉಪಾದ್ಯಕ್ಷೆರಾದ ಚೂಡಮಣಿ, ಮತ್ತು ಶಾರದ ಶೆಟ್ಟಿ , ಜಾವೀದ್ ಸೆಲಿಂ , ಜೆಪ್ಪು ಇಬ್ರಾಹಿಂ , ಸೆಲೀಂ ಅಬ್ದುಲ್ ಕರೀಂ ಜಪ್ಪು , ಸೇರಿದಂತೆ ಪಕ್ಷದ ಹಲವಾರು ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು: ರಾತ್ರಿ ವೇಳೆ ರಾ. ಹೆದ್ದಾರಿಗಳಲ್ಲಿ ತೃತೀಯಲಿಂಗಿಗಳು ಗುಂಪು ಸೇರುವುದನ್ನ ತಡೆಯಲು ಡಿಸಿ ಸೂಚನೆ

October 10, 2026

ಕುಂಪಲ ಶಿವಪುರ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ

October 9, 2026

ಮೈತ್ರಿ ಮಲ್ಲಿ ವಿಕಾಸ್: ಮಂಗಳೂರಿನಿಂದ ಪ್ಯಾರಿಸ್ ರನ್‌ವೇವರೆಗೆ— ಸೌಂದರ್ಯ, ಆತ್ಮವಿಶ್ವಾಸ ಮತ್ತು ಹೆಮ್ಮೆಯ ಪಯಣ

October 9, 2026

Comments are closed.

Advertise
ಸಂಪರ್ಕಿಸಿ

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026

ಇನ್ನುಂದೆ ಕೃತಕ ಪನೀರ್‌ಗೆ ಅನಲಾಗ್ ಪನೀರ್ ಎಂದು ಹೆಸರು ಬದಲಿಸುವಂತೆ ಕೇಂದ್ರ ನೋಟಿಫಿಕೇಷನ್

September 25, 2026
suddi

ಮಂಗಳೂರು: ರಾತ್ರಿ ವೇಳೆ ರಾ. ಹೆದ್ದಾರಿಗಳಲ್ಲಿ ತೃತೀಯಲಿಂಗಿಗಳು ಗುಂಪು ಸೇರುವುದನ್ನ ತಡೆಯಲು ಡಿಸಿ ಸೂಚನೆ

By UllalaVaniOctober 10, 20260

ಮಂಗಳೂರು, ಅ.10: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ತೃತೀಯಲಿಂಗಿಗಳು ಗುಂಪು ಸೇರಿ ಸವಾರರಿಗೆ ತೊಂದರೆ ನೀಡುವುದನ್ನು ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ…

ಕುಂಪಲ ಶಿವಪುರ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ

October 9, 2026

ಮೈತ್ರಿ ಮಲ್ಲಿ ವಿಕಾಸ್: ಮಂಗಳೂರಿನಿಂದ ಪ್ಯಾರಿಸ್ ರನ್‌ವೇವರೆಗೆ— ಸೌಂದರ್ಯ, ಆತ್ಮವಿಶ್ವಾಸ ಮತ್ತು ಹೆಮ್ಮೆಯ ಪಯಣ

October 9, 2026

ಹಿದಾಯತ್ ನಗರ SYS ವತಿಯಿಂದ ಮುಹಿಯ್ಯದ್ದೀನ್ ಮಾಲೆ ಆಲಾಪನೆ

October 9, 2026
1 2 3 … 2,129 Next
Automatic YouTube Gallery

ಅಸೈಗೋಳಿ :ಸ್ವದೇಶಿ ಉತ್ಪನ್ನಗಳ ಮೇಳ -ನೇರಪ್ರಸಾರ | Ullalavani

ಕೇಂದ್ರ ಸರ್ಕಾರದ ಸಬ್ಸಿಡಿ ಸಾಲದ ಬಗ್ಗೆ ಮಾಹಿತಿ ಪಡೆಯಲು ಇಂದಿನ ಲೈವ್ ವೀಕ್ಷಿಸಿ!
ನಿಮಗೆ ಸ್ವಂತ ಉದ್ಯಮ ಆರಂಭಿಸಲು ಅಥವಾ ಈಗಿರುವ ಉದ್ಯಮವನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದ ಸಬ್ಸಿಡಿ ಸಾಲದ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಇಂದಿನ ಲೈವ್ ವೀಕ್ಷಿಸಿ.

💰 ಕೇಂದ್ರ ...
ಸರ್ಕಾರದ ಸಬ್ಸಿಡಿ ಸಾಲದ ಯೋಜನೆಗಳು
🏢 ಸ್ವಂತ ಉದ್ಯಮ ಆರಂಭಿಸಲು ಸಾಲ ಪಡೆಯುವುದು ಹೇಗೆ?
📝 ಅರ್ಜಿ ಸಲ್ಲಿಸುವ ವಿಧಾನ ಮತ್ತು ಅರ್ಹತೆಯ ಮಾಹಿತಿ
ಇಂದಿನ ಲೈವ್ ವೀಕ್ಷಿಸಿ… ಯೋಜನೆಗಳ ಮಾಹಿತಿ ತಿಳಿದುಕೊಳ್ಳಿ!

🇮🇳 ಸ್ವದೇಶೀ ಉತ್ಪನ್ನಗಳ ಮೇಳ
ಪ್ರಪ್ರಥಮ ಬಾರಿಗೆ ನಡೆಯುತ್ತಿರುವ ಮಾರಾಟ ಮಳಿಗೆಗಳು
ಅಸ್ಸೈಗೋಳಿ ಬಂಟರ ಭವನದಿಂದ
🔴 ನೇರ ಪ್ರಸಾರ |

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅಸೈಗೋಳಿ :ಸ್ವದೇಶಿ ಉತ್ಪನ್ನಗಳ ಮೇಳ -ನೇರಪ್ರಸಾರ | Ullalavani
Now Playing
ಅಸೈಗೋಳಿ :ಸ್ವದೇಶಿ ಉತ್ಪನ್ನಗಳ ಮೇಳ -ನೇರಪ್ರಸಾರ | Ullalavani
ಕೇಂದ್ರ ಸರ್ಕಾರದ ಸಬ್ಸಿಡಿ ಸಾಲದ ಬಗ್ಗೆ ಮಾಹಿತಿ ಪಡೆಯಲು ಇಂದಿನ ಲೈವ್ ವೀಕ್ಷಿಸಿ! ...
ಕೇಂದ್ರ ಸರ್ಕಾರದ ಸಬ್ಸಿಡಿ ಸಾಲದ ಬಗ್ಗೆ ಮಾಹಿತಿ ಪಡೆಯಲು ಇಂದಿನ ಲೈವ್ ವೀಕ್ಷಿಸಿ!
ನಿಮಗೆ ಸ್ವಂತ ಉದ್ಯಮ ಆರಂಭಿಸಲು ಅಥವಾ ಈಗಿರುವ ಉದ್ಯಮವನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದ ಸಬ್ಸಿಡಿ ಸಾಲದ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಇಂದಿನ ಲೈವ್ ವೀಕ್ಷಿಸಿ.

💰 ಕೇಂದ್ರ ...
ಸರ್ಕಾರದ ಸಬ್ಸಿಡಿ ಸಾಲದ ಯೋಜನೆಗಳು
🏢 ಸ್ವಂತ ಉದ್ಯಮ ಆರಂಭಿಸಲು ಸಾಲ ಪಡೆಯುವುದು ಹೇಗೆ?
📝 ಅರ್ಜಿ ಸಲ್ಲಿಸುವ ವಿಧಾನ ಮತ್ತು ಅರ್ಹತೆಯ ಮಾಹಿತಿ
ಇಂದಿನ ಲೈವ್ ವೀಕ್ಷಿಸಿ… ಯೋಜನೆಗಳ ಮಾಹಿತಿ ತಿಳಿದುಕೊಳ್ಳಿ!

🇮🇳 ಸ್ವದೇಶೀ ಉತ್ಪನ್ನಗಳ ಮೇಳ
ಪ್ರಪ್ರಥಮ ಬಾರಿಗೆ ನಡೆಯುತ್ತಿರುವ ಮಾರಾಟ ಮಳಿಗೆಗಳು
ಅಸ್ಸೈಗೋಳಿ ಬಂಟರ ಭವನದಿಂದ
🔴 ನೇರ ಪ್ರಸಾರ |

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ULLALA|| ಸಂಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸಿದ ಮೀನುಗಾರರ ಸಂಘ
Now Playing
ULLALA|| ಸಂಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸಿದ ಮೀನುಗಾರರ ಸಂಘ
ಉಳ್ಳಾಲ: ಮಾನವೀಯತೆ ಮೆರೆದ ಮೀನುಗಾರರು: ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃ#ದೇ* ...
ಉಳ್ಳಾಲ: ಮಾನವೀಯತೆ ಮೆರೆದ ಮೀನುಗಾರರು: ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃ#ದೇ* ಪತ್ತೆ : ತುರ್ತು ರಕ್ಷಣಾ ದೋಣಿಯ ಮೂಲಕ ಶೋಧ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version