ಮಂಗಳೂರು: ಉರ್ವಾದ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕರಾದ ಅಲೋಶಿಯಸ್ ಡಿಸೋಜ, “ದೈನಂದಿನ ಜೀವನದಲ್ಲಿ ಯೋಗಾಭ್ಯಾಸವನ್ನು ಅಳವಡಿಸಿಕೊಂಡು ಆರೋಗ್ಯಯುತ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು. ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಅತ್ಯುತ್ತಮ ಸಾಧನವಾಗಿದೆ” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಮೊದ್ ಅರಿಗ, ಹಿರಿಯ ಶಿಕ್ಷಕಿ ಲವೀನ ಡಿಕುನ್ನ, ಶಾಲಾ ನಾಯಕ ಹರ್ಷವರ್ಧನ್, ಉಪನಾಯಕಿ ಜೇನ್ ಹಾಗೂ ವಿದ್ಯಾರ್ಥಿ ಮಂತ್ರಿಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಬಳಿಕ ವಿದ್ಯಾರ್ಥಿಗಳಿಂದ ಆಕರ್ಷಕ ಯೋಗಾಸನಗಳ ಪ್ರದರ್ಶನ ನಡೆಯಿತು. ಸಮೂಹ ಗೀತೆಯ ಮೂಲಕ ಯೋಗದ ಮಹತ್ವವನ್ನು ಮನದಟ್ಟಾಗಿಸಲಾಯಿತು. 9ನೇ ತರಗತಿಯ ವಿದ್ಯಾರ್ಥಿನಿ ಆಜ್ಞಾ ಯೋಗದ ಪ್ರಾಮುಖ್ಯತೆಯ ಕುರಿತು ಮಾತನಾಡಿದರು.
ದೈಹಿಕ ಶಿಕ್ಷಣ ಶಿಕ್ಷಕರಾದ ಸುಧಾಕರ್ ಹಾಗೂ ಹರಿಣಾಕ್ಷಿ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. 9ನೇ ತರಗತಿಯ ವಿದ್ಯಾರ್ಥಿ ಮಯಾಂಕ್ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.



