Site icon Ullalavani

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ವಕೀಲ ಮೋಹನರಾಜ್ ಕೆ.ಆರ್. ನೂತನ ಸದಸ್ಯರಾಗಿ ನೇಮಕ

ಮಂಗಳೂರು: ಪ್ರತಿಷ್ಠಿತ ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ನೂತನ ಸದಸ್ಯರಾಗಿ ಹಿರಿಯ ವಕೀಲರು ಹಾಗೂ ಬಿಜೆಪಿ ಹಿರಿಯ ಮುಖಂಡರಾದ ಮೋಹನರಾಜ್ ಕೆ.ಆರ್. ಅವರು ನೇಮಕಗೊಂಡಿದ್ದಾರೆ.


ಕಾನೂನು ಕ್ಷೇತ್ರದಲ್ಲಿ ಅನುಭವ ಹೊಂದಿರುವ ಮೋಹನರಾಜ್ ಕೆ.ಆರ್. ಅವರು ಹಲವು ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾರ್ವಜನಿಕ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಸಂಘಟನೆ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ಜನಸಾಮಾನ್ಯರ ವಿಶ್ವಾಸ ಗಳಿಸಿರುವ ಅವರು, ಇದೀಗ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಸದಸ್ಯರಾಗಿ ಆಯ್ಕೆಯಾಗಿರುವುದು ಅವರ ಸಾರ್ವಜನಿಕ ಸೇವೆಗೆ ಸಂದ ಗೌರವವಾಗಿದೆ.
ನಾರಾಯಣ ಗುರುಗಳ ತತ್ವ, ಆದರ್ಶ ಹಾಗೂ ಸಾಮಾಜಿಕ ಸಮಾನತೆಯ ಮೌಲ್ಯಗಳನ್ನು ಅಧ್ಯಯನ, ಸಂಶೋಧನೆ ಮತ್ತು ಸಮಾಜದಲ್ಲಿ ಪ್ರಸಾರ ಮಾಡುವ ಕಾರ್ಯದಲ್ಲಿ ಅವರ ಅನುಭವ ಮತ್ತು ಮಾರ್ಗದರ್ಶನ ಮಹತ್ವದ ಪಾತ್ರ ವಹಿಸಲಿದೆ ಎಂದು ವಿವಿಧ ಗಣ್ಯರು ಅಭಿಪ್ರಾಯಪಟ್ಟಿದ್ದಾರೆ.


ಈ ಹಿನ್ನೆಲೆಯಲ್ಲಿ ಮೋಹನರಾಜ್ ಕೆ.ಆರ್. ಅವರಿಗೆ ರಾಜಕೀಯ, ಸಾಮಾಜಿಕ ಹಾಗೂ ಶೈಕ್ಷಣಿಕ ವಲಯದ ಗಣ್ಯರು, ಸ್ನೇಹಿತರು ಮತ್ತು ಅಭಿಮಾನಿಗಳು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದು, ನೂತನ ಜವಾಬ್ದಾರಿಯಲ್ಲಿ ಯಶಸ್ಸು ಸಾಧಿಸಿ ಸಮಾಜಕ್ಕೆ ಇನ್ನಷ್ಟು ಸೇವೆ ಸಲ್ಲಿಸಲಿ ಎಂದು ಶುಭ ಹಾರೈಸಿದ್ದಾರೆ.

Exit mobile version