ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ವಿ.ಪಿ. ಮೋಹನ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.


ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಅವರು ಶಾಲು ಹೊದಿಸಿ ಸನ್ಮಾನಿಸಿ, ವಿಧಾನ ಪರಿಷತ್ ಸದಸ್ಯರಾಗಿ ಅವರ ಮುಂದಿನ ಕಾರ್ಯಯೋಜನೆಗಳು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ರಾಜ್ಯದ ಅಭಿವೃದ್ಧಿ ಹಾಗೂ ಜನಪರ ಆಡಳಿತಕ್ಕೆ ಅವರ ಸೇವೆ ಮತ್ತಷ್ಟು ಬಲ ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಉಪಸ್ಥಿತರಿದ್ದು, ನೂತನ ವಿಧಾನ ಪರಿಷತ್ ಸದಸ್ಯರಿಗೆ ಅಭಿನಂದನೆ ಸಲ್ಲಿಸಿ ಶುಭಾಶಯ ಕೋರಿದರು.
ಈ ವೇಳೆ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

