Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

UllalaVaniBy UllalaVaniJune 27, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಎಜು ಕಾರುಣ್ಯ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯ ಸಮಾಜಕ್ಕೆ ಪ್ರೇರಣಾದಾಯಿ: ಕಾಜವ

ಮಂಗಳೂರು: ಪ್ರಾಮಾಣಿಕ, ನೇರ ಮತ್ತು ನಿಷ್ಠುರ ಪತ್ರಕರ್ತರಾಗಿದ್ದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೇಪುಣಿಯವರ ಸ್ಮರಣಾರ್ಥ ದತ್ತಿ ನಿಧಿ ಯೋಜನೆ ಆರಂಭಿಸಿರುವ ಎಜು ಕಾರುಣ್ಯ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯ ಸಮಾಜಕ್ಕೆ ಪ್ರೇರಣಾದಾಯಿ ಎಂದು ನರಿಂಗಾನ ಕಂಬಳೋತ್ಸವ ಸಮಿತಿಯ ಅಧ್ಯಕ್ಷ ಪ್ರಶಾಂತ್ ಕಾಜವ ಶ್ಲಾಘಿಸಿದರು.

ಮಂಗಳೂರಿನ ಪ್ರೆಸ್‌ಕ್ಲಬ್ ಸಭಾಂಗಣದಲ್ಲಿ ಎಜುಕಾರುಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ಆಯೋಜಿಸಿದ್ದ ದತ್ತಿನಿಧಿ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ೧.೫೦ ಲಕ್ಷ ರೂ. ಮೊತ್ತದ ದತ್ತಿನಿಧಿಯನ್ನು ವಿವಿಧ ಶಾಲೆ – ಕಾಲೇಜುಗಳ ಒಟ್ಟು ೯ ಮಂದಿ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಯಿತು. ಸದಾ ಸಮಾಜಮುಖಿಯಾಗಿ ಯೋಚಿಸುತ್ತಿದ್ದ ಬಾಳೇಪುಣಿಯವರು ನ್ಯಾಯಕ್ಕಾಗಿ ಹೋರಾಟ ಮಾಡುವ ವ್ಯಕ್ತಿತ್ವವುಳ್ಳವರಾಗಿದ್ದರು. ಒಡನಾಡಿಯಾಗಿದ್ದು, ಶಾಲಾ – ಕಾಲೇಜುಗಳಲ್ಲಿಯೇ ನಿಷ್ಠುರವಾದಿಯಾಗಿದ್ದರು. ಅವರ ಹೆಸರಿನಲ್ಲಿ ಕಳೆದ ಎರಡು ವರ್ಷದಿಂದ ನೀಡುತ್ತಿರುವ ದತ್ತಿ ನಿಧಿ ಯೋಜನೆ ಮತ್ತಷ್ಟು ಮಂದಿಗೆ ಪ್ರೇರಣೆ ನೀಡುವಂತಾಗಲಿ ಎಂದರು.
ಉದ್ಯಮಿ ರಾಧಾಕೃಷ್ಣ ರೈ ಉಮಿಯ ಮಾತನಾಡಿ, ಬಾಳೇಪುಣಿಯವರ ವ್ಯಕ್ತಿತ್ವ ಮಾದರಿಯಾದುದು. ಪತ್ರಕರ್ತರಾಗಿದ್ದುಕೊಂಡು ಅವರು ಮಾಡಿದ ಕಾರ್ಯ ಸದಾ ನೆನಪಿನಲ್ಲಿ ಉಳಿಯುವಂತದ್ದು. ಅಕ್ಷರ ಸಂತ ಹರೇಕಳ ಹಾಜಬ್ಬರನ್ನು ಮೊದಲ ಬಾರಿಗೆ ಸಮಾಜಕ್ಕೆ ಪರಿಚಯಿಸಿದ ಹೆಗ್ಗಳಿಕೆ ಬಾಳೇಪುಣಿಯವರದ್ದು. ಅವರ ಹೆಸರಿನಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕೆಲಸ ಎಜುಕಾರುಣ್ಯ ಟ್ರಸ್ಟ್ ಮಾಡುತ್ತಿರುವುದು ಹೆಮ್ಮೆಯ ವಿಷಯ ಎಂದರು.
ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಶಾ ಮಾತನಾಡಿ, ಓರ್ವ ಉತ್ತಮ ಪತ್ರಕರ್ತರಾಗಿ ಮಾದರಿಯಾಗಿದ್ದ ಬಾಳೇಪುಣಿಯವರು ಜಿಲ್ಲೆಯಲ್ಲಿ ಹಲವು ಬದಲಾವಣೆಗೂ ಕಾರಣರಾಗಿದ್ದರು ಎಂದರು.
ದ.ಕ.ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ಹಾಗೂ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಬಾಳೇಪುಣಿಯವರೊಂದಿಗಿನ ಒಡನಾಟದ ನೆನಪುಗಳನ್ನು ಹಂಚಿಕೊಂಡರು.
ಅಧ್ಯಕ್ಷತೆ ವಹಿಸಿದ್ದ ಜನ ಶಿಕ್ಷಣ ಟ್ರಸ್ಟ್ ನಿರ್ದೇಶಕ ಶೀನ ಶೆಟ್ಟಿ ಮಾತನಾಡಿ, ಬಾಳೇಪುಣಿಯವರದ್ದು ಆದರ್ಶ ವ್ಯಕ್ತಿತ್ವ. ತಮ್ಮ ಬದುಕಿನುದ್ದಕ್ಕೂ ಕೆಲವೊಂದು ಮೌಲ್ಯಗಳನ್ನು ಅಳವಡಿಸಿಕೊಂಡು ಅದಕ್ಕೆ ಬದ್ಧರಾಗಿ ಬೆಳೆದವರು. ಅವರ ಆಶಯದಂತೆ ಎಜುಕಾರುಣ್ಯ ಟ್ರಸ್ಟ್ ಕೂಡಾ ಕಾರ್ಯನಿರ್ವಹಿಸುತ್ತಿದ್ದು, ಶಿಕ್ಷಣದ ಮೂಲಕ ದೇಶವನ್ನು ಕಟ್ಟುವ ಕೆಲಸ ಮಾಡುತ್ತಿದೆ ಎಂದರು.
ಕಾವೂರು ವ್ಯವಸಾಯ ಸೇವಾಸಹಕಾರಿ ಸಂಘದ ಅಧ್ಯಕ್ಷ ಲೋಕೇಶ್ ಭಂಡಾರಿ, ಜನ ಶಿಕ್ಷಣ ಟ್ರಸ್ಟ್ ನ ಇನ್ನೋರ್ವ ನಿರ್ದೇಶಕ ಕೃಷ್ಣ ಮೂಲ್ಯ, ಕರಾವಳಿ ಕುರುಬರ ಸಂಘದ ಅಧ್ಯಕ್ಷ ನಿರಂಜನ್ ಎಲ್.ಆರ್. ಗಾಂಧಿನಗರ, ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ರಮೇಶ್ ಶೆಟ್ಟಿ ಪಂಜಿಮೊಗರು, ಟ್ರಸ್ಟಿಗಳಾದ ಪ್ರಶಾಂತ್ ಅಬ್ಬೆಟ್ಟು, ದಿನೇಶ್ ನಾಯ್ಕ ಕಾಶಿಪಟ್ಣ, ಬಾಳೇಪುಣಿ ಅವರ ಪತ್ನಿ ಜಯಂತಿ ಬಾಳೇಪುಣಿ, ಪುತ್ರ ಮನೇಶ್ ಬಾಳೇಪುಣಿ, ಉಪಸ್ಥಿತರಿದ್ದರು.
ಟ್ರಸ್ಟ್ ಅಧ್ಯಕ್ಷ ಮೋಹನ್ ದಾಸ್ ಮರಕಡ ಪ್ರಸ್ತಾವಿಕವಾಗಿ ಮಾತನಾಡಿದರು. ಪತ್ರಕರ್ತ ಅನ್ಸಾರ್ ಇನೋಳಿ ಸ್ವಾಗತಿಸಿ, ಮಾನಸ ವಂದಿಸಿದರು. ಬಬಿತಾ ಎಂ. ಮರಕಡ ಕಾರ್ಯಕ್ರಮ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕರ್ನಾಟಕ ವಿಧಾನ ಪರಿಷತ್ ನೂತನ ಶಾಸಕರಿಗೆ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ

June 27, 2026

ಉರ್ವ ಸಂತ ಅಲೋಶಿಯಸ್ ಇಂಗ್ಲೀಷ್‌ ಮೀಡಿಯಂ ಸ್ಕೂಲ್ ನಲ್ಲಿ ಕಂಪ್ಯೂಟರ್ ಕ್ಲಬ್ ಉದ್ಘಾಟನೆ

June 27, 2026

ಮಾತೃಶ್ರೀ ಬಡಾವಣೆಯ ಮಮತಾ ಶೆಟ್ಟಿ ಮತ್ತು ಅಗಸ್ಟಿನ್ ರ ಮನೆಯ ದಾರಿಗೆ ಅನುದಾನ ಮಂಜೂರಾದರೂ, ಟೆಂಡರ್‌ ಪೂರ್ಣಗೊಂಡಿಲ್ಲ : ಕೌನ್ಸಿಲರ್‌ ಹರೀಶ್‌ ರಾವ್‌ ಮಡ್ಯಾರ್

June 26, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

By UllalaVaniJune 27, 20260

ಎಜು ಕಾರುಣ್ಯ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯ ಸಮಾಜಕ್ಕೆ ಪ್ರೇರಣಾದಾಯಿ: ಕಾಜವ ಮಂಗಳೂರು: ಪ್ರಾಮಾಣಿಕ, ನೇರ ಮತ್ತು ನಿಷ್ಠುರ ಪತ್ರಕರ್ತರಾಗಿದ್ದ ಹಿರಿಯ…

ಕರ್ನಾಟಕ ವಿಧಾನ ಪರಿಷತ್ ನೂತನ ಶಾಸಕರಿಗೆ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ

June 27, 2026

ಉರ್ವ ಸಂತ ಅಲೋಶಿಯಸ್ ಇಂಗ್ಲೀಷ್‌ ಮೀಡಿಯಂ ಸ್ಕೂಲ್ ನಲ್ಲಿ ಕಂಪ್ಯೂಟರ್ ಕ್ಲಬ್ ಉದ್ಘಾಟನೆ

June 27, 2026

ಮಾತೃಶ್ರೀ ಬಡಾವಣೆಯ ಮಮತಾ ಶೆಟ್ಟಿ ಮತ್ತು ಅಗಸ್ಟಿನ್ ರ ಮನೆಯ ದಾರಿಗೆ ಅನುದಾನ ಮಂಜೂರಾದರೂ, ಟೆಂಡರ್‌ ಪೂರ್ಣಗೊಂಡಿಲ್ಲ : ಕೌನ್ಸಿಲರ್‌ ಹರೀಶ್‌ ರಾವ್‌ ಮಡ್ಯಾರ್

June 26, 2026
1 2 3 … 1,986 Next
Automatic YouTube Gallery

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟನೆಯಲ್ಲಿ ಆಲ್ವಿನ್ ಡಿಸೋಜಾ ಹೇಳಿದ್ದೇನು ?

ಸರ್ವರನ್ನು ಸಮಾನವಾಗಿ ಕಾಣುವವರು ನಮ್ಮ ಸಚಿವರು , ಅವರ ವಿರೋಧ ಮಾಡುವುದರಲ್ಲಿ ಅರ್ಥವೇ ಇಲ್ಲ! ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟನೆಯಲ್ಲಿ
ಆಲ್ವಿನ್ ಡಿಸೋಜಾ ಹೇಳಿದ್ದೇನು ?

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟನೆಯಲ್ಲಿ ಆಲ್ವಿನ್ ಡಿಸೋಜಾ ಹೇಳಿದ್ದೇನು ?
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟನೆಯಲ್ಲಿ ಆಲ್ವಿನ್ ಡಿಸೋಜಾ ಹೇಳಿದ್ದೇನು ?
ಸರ್ವರನ್ನು ಸಮಾನವಾಗಿ ಕಾಣುವವರು ನಮ್ಮ ಸಚಿವರು , ಅವರ ವಿರೋಧ ಮಾಡುವುದರಲ್ಲಿ ...
ಸರ್ವರನ್ನು ಸಮಾನವಾಗಿ ಕಾಣುವವರು ನಮ್ಮ ಸಚಿವರು , ಅವರ ವಿರೋಧ ಮಾಡುವುದರಲ್ಲಿ ಅರ್ಥವೇ ಇಲ್ಲ! ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟನೆಯಲ್ಲಿ
ಆಲ್ವಿನ್ ಡಿಸೋಜಾ ಹೇಳಿದ್ದೇನು ?

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಶಾಸಕರು ರಸ್ತೆ ಮಧ್ಯಭಾಗದಲ್ಲೇ ಕಾಮಗಾರಿ ನಡೆಸದೇ ಇರುವುದು ಧರ್ಮಬೇಧವಲ್ಲವೇ? : ದಿವ್ಯಾ ಸತೀಶ್‌  ಶೆಟ್ಟಿ | Ullalavani
Now Playing
ಶಾಸಕರು ರಸ್ತೆ ಮಧ್ಯಭಾಗದಲ್ಲೇ ಕಾಮಗಾರಿ ನಡೆಸದೇ ಇರುವುದು ಧರ್ಮಬೇಧವಲ್ಲವೇ? : ದಿವ್ಯಾ ಸತೀಶ್‌ ಶೆಟ್ಟಿ | Ullalavani
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version