Site icon Ullalavani

ನೂರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸದಲ್ಲಿ ಸಮವಸ್ತ್ರ ಹಾಗೂ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮ

ಉಳ್ಳಾಲ: ಉಳ್ಳಾಲ ತಾಲೂಕಿನ ಇರಾ ಗ್ರಾಮದ ಬಾಳೆಪುಣಿ ನೂರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಗುರುತಿನ ಚೀಟಿ (ID ಕಾರ್ಡ್) ವಿತರಣಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಈ ಕಾರ್ಯಕ್ರಮಕ್ಕೆ ಶೈಖುನಾ ಬಾಳೆಪುಣಿ ಉಸ್ತಾದ್ ನೇತೃತ್ವ ವಹಿಸಿ, ದುಆ ನೆರವೇರಿಸಿ ವಿದ್ಯಾರ್ಥಿಗಳಿಗೆ ಅಮೂಲ್ಯವಾದ ಉಪದೇಶ ಹಾಗೂ ಮಾರ್ಗದರ್ಶನ ನೀಡಿದರು.

ಈ ಕಾರ್ಯಕ್ರಮದಲ್ಲಿ ಜಮಾಅತ್‌ನ ಪದಾಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿಗಳ SBS ಮುಹಾಳರ ನಡೆಯಿತು. ನಂತರ ವಿದ್ಯಾರ್ಥಿಗಳ ಅಸೆಂಬ್ಲಿ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಬಾಳೆಪುಣಿ ಸದರ್ ಉಸ್ತಾದ್ ಹಾರಿಸ್ ಹನೀಫಿ ಮತ್ತು ಮುಅಲ್ಲಿಮರು ನಡೆಸಿದರು.

Exit mobile version