ಉಳ್ಳಾಲ ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟ್ ಹಾಗೂ ಮದನಿ ಎಜುಕೇಶನ್ ಅಸೋಸಿಯೇಷನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಕಾರ್ಯಕ್ರಮ ಅಳೇಕಲದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ತ್ವಾಹಾ ಹಾಜಿ ವಹಿಸಿದ್ದರು
ಈ ಸಂದರ್ಭದಲ್ಲಿ ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ , ಮದನಿ ವಿದ್ಯಾಸಂಸ್ಥೆಯ ಸಂಚಾಲಕ ಮೊಹಮ್ಮದ್, ಮದನಿ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ಯು.ಎನ್. ಇಕ್ಬಾಲ್, ಮದನಿ ವಿದ್ಯಾಸಂಸ್ಥೆಯ ಸಮಿತಿ ಸದಸ್ಯ ಯು.ಎ. ಫಾರೂಕ್, ಸಹ ಶಿಕ್ಷಕ ಪ್ರಜ್ಞ, ದೈಹಿಕ ಶಿಕ್ಷಣ ಶಿಕ್ಷಕ ಮೊನಪ್ಪ , ಇಮ್ತಿಯಾಝ್ ಉಪಸ್ಥಿತರಿದ್ದರು.