Site icon Ullalavani

SNEC ಪರೀಕ್ಷೆಯಲ್ಲಿ ಶಂಸುಲ್ ಉಲಮಾ ಇಸ್ಲಾಮಿಕ್ ಅಕಾಡೆಮಿ ವಿದ್ಯಾರ್ಥಿಗಳ ಭರ್ಜರಿ ಸಾಧನೆ

ವಾದಿತ್ವೈಬ, ಕಿನ್ಯಾ, ಜು. 1: ಸಮಸ್ತ ನ್ಯಾಷನಲ್ ಎಜುಕೇಶನ್ ಕೌನ್ಸಿಲ್ (SNEC) ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನ ಸೆಮಿಸ್ಟರ್ ಪರೀಕ್ಷೆಯಲ್ಲಿ ವಾದಿತ್ವೈಬ, ಕಿನ್ಯಾದ ಶಂಸುಲ್ ಉಲಮಾ ದಾರುಸ್ಸಲಾಂ ಇಸ್ಲಾಮಿಕ್ ಅಕಾಡೆಮಿಯ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

HS2 ವಿಭಾಗದಲ್ಲಿ ವಿದ್ಯಾರ್ಥಿ ಮುಹಮ್ಮದ್ ಇಶಾದ್ ಪ್ರಥಮ ರ‍್ಯಾಂಕ್ ಗಳಿಸಿದ್ದು, ಅಹ್ಮದ್ ತಾಹಿರ್ ಇ.ಕೆ. ನಾಲ್ಕನೇ ರ‍್ಯಾಂಕ್ ಹಾಗೂ ಮುಹಮ್ಮದ್ ಇಶಾಂ ಬಿ.ಎಸ್. ಹತ್ತನೇ ರ‍್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಇದೇ ವೇಳೆ HS1 ವಿಭಾಗದಲ್ಲಿ ಹಾಫಿಜ್ ಅಬ್ಬಾಸ್ ಮೂರನೇ ರ‍್ಯಾಂಕ್ ಗಳಿಸುವ ಮೂಲಕ ಸಂಸ್ಥೆಯ ಶೈಕ್ಷಣಿಕ ಮೇಲುಗೈಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ವಿದ್ಯಾರ್ಥಿಗಳ ಈ ಯಶಸ್ಸಿಗೆ ಅವರ ನಿರಂತರ ಪರಿಶ್ರಮ, ಶಿಕ್ಷಕರ ಸಮರ್ಪಕ ಮಾರ್ಗದರ್ಶನ ಹಾಗೂ ಪೋಷಕರ ಪ್ರೋತ್ಸಾಹವೇ ಪ್ರಮುಖ ಕಾರಣವಾಗಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ತಿಳಿಸಿದೆ. ವಿದ್ಯಾರ್ಥಿಗಳ ಸಾಧನೆಯು ಸಂಸ್ಥೆಯ ಗುಣಮಟ್ಟದ ಶಿಕ್ಷಣ ಮತ್ತು ಶೈಕ್ಷಣಿಕ ಶ್ರೇಷ್ಠತೆಯ ಪ್ರತೀಕವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಾಧನೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯ ಸದಸ್ಯರು ಸನ್ಮಾನಿಸಿ, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡುವಂತೆ ಶುಭ ಹಾರೈಸಿದರು.

Exit mobile version