ಮಂಗಳೂರು, ಜು. 04;ಕಂಟೈನರ್ ಲಾರಿಯೊಂದು ಡಿಕ್ಕಿಯಾಗಿ ಸ್ಕೂಟರ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಉಡುಪಿ ರಸ್ತೆಯ ಕೂಳೂರು ವಿ.ಅರ್.ಎಲ್ ಕಚೇರಿ ಎದುರು ಶುಕ್ರವಾರ ಸಂಜೆ ನಡೆದಿದೆ.
ಸದಾನಂದ ಶೆಟ್ಟಿಗಾರ್(46) ಮೃತ ಸ್ಕೂಟರ್ ಸವಾರ.ಮೃತರು ಕೊಟ್ಟಾರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿರುವಾಗ ಅದೇ ರಸ್ತೆಯಲ್ಲಿ ಬರುತ್ತಿದ್ದ ಚಾಲಕ ಮಹಮ್ಮದ್ ಅಜರುದ್ದೀನ್ ಚಲಾಯಿಸುತ್ತಿದ್ದ ಕಂಟೈನರ್ ಲಾರಿ ಡಿಕ್ಕಿಯಾಗಿದೆ.ಇನ್ನು ಚಾಲಕ ಮಹಮ್ಮದ್ ಅಜರುದ್ದೀನ್ ನಿರ್ಲಕ್ಷ್ಯ ಹಾಗೂ ದುಡುಕುತನದಿಂದ ಲಾರಿ ಚಲಾಯಿಸಿ ಸ್ಕೂಟರ್ ಗೆ ಡಿಕ್ಕಿ ಪಡಿಸಿದ್ದಾರೆ. ಘಟನೆ ವೇಳೆ ಲಾರಿ ಸವಾರನ ಮೇಲೆ ಚಲಿಸಿ ಸ್ಕೂಟರ್ ಚಾಲಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.