ಕುತ್ತಾರು : ವನಮಹೋತ್ಸವವು ಕೇವಲ ಗಿಡ ನೆಡುವ ಕಾರ್ಯಕ್ರಮವಲ್ಲ, ಅದು ಪ್ರಕೃತಿಯನ್ನು ಉಳಿಸುವ ಮತ್ತು ಮುಂದಿನ ಪೀಳಿಗೆಗೆ ಹಸಿರು ಪರಿಸರವನ್ನು ನೀಡುವ ಮಹತ್ವದ ಸಂಕಲ್ಪವಾಗಿದೆ. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದನ್ನು ಮರವಾಗಿ ಬೆಳೆಸಿದರೆ, ಪರಿಸರ ಸಂರಕ್ಷಣೆಗೆ ಅಮೂಲ್ಯ ಕೊಡುಗೆ ನೀಡಿದಂತಾಗುತ್ತದೆ ಎಂದು ಎಸ್ ಇ ಝೆಡ್ ಇಂಜಿನಿಯರ್ ಜೈಶಂಕರ್ ಅಭಿಪ್ರಾಯಪಟ್ಟರು.

ಅವರು ಕುತ್ತಾರಿನ ಶ್ರೀ ಪಂಜಂದಾಯ, ಬಂಟ, ವೈದ್ಯನಾಥ ದೈವಸ್ಥಾನ ಮತ್ತು ಕೊರಗತನಿಯ ದೈವದ ಆದಿಸ್ಥಳ ಮತ್ತು ಪಂಡಿತ್ ಹೌಸ್ ದಿವ್ಯಜ್ಯೋತಿ ಕ್ರಿಕೆಟರ್ಸ್ ಆಶ್ರಯದಲ್ಲಿ ಕುತ್ತಾರು ಮುನ್ನೂರಿನ ಭಂಡಾರಬೈಲಿನಲ್ಲಿ ಶ್ರೀ ಪಂಜಂದಾಯ ಬಂಟ ವೈದ್ಯನಾಥ ದೈವಸ್ಥಾನದ ವಠಾರದಲ್ಲಿ ವನಮಹೋತ್ಸವ ನೆರವೇರಿಸಿ ಮಾತನಾಡಿದರು.

ವಿ.ಹಿಂ.ಪ ಮುಖಂಡ ಪ್ರವೀಣ್ ಕುತ್ತಾರ್ ಮಾತನಾಡಿ, ದಿವ್ಯಜ್ಯೋತಿ ಕ್ರಿಕೆಟರ್ಸ್ ಕೇವಲ ಕ್ರೀಡಾ ಚಟುವಟಿಕೆಗಳಿಗೆ ಸೀಮಿತವಾಗದೇ, ಸಮಾಜಮುಖಿ ಕಾರ್ಯಗಳ ಮೂಲಕ ಮಾನವೀಯ ಸೇವೆಯ ಮಾದರಿಯಾಗಿದೆ. ಸಂಘವು ಹಲವು ವರ್ಷಗಳಿಂದ ಉಚಿತ ಆಂಬ್ಯುಲೆನ್ಸ್ ಸೇವೆ ಒದಗಿಸುವುದರೊಂದಿಗೆ, ಸಂಕಷ್ಟದಲ್ಲಿರುವ ಹಲವಾರು ರೋಗಿಗಳಿಗೆ ಆರೋಗ್ಯ ಸಹಾಯಧನ ನೀಡಿ ಮಾನವೀಯ ಕಾಳಜಿಯನ್ನು ನೀಡುತ್ತಿದೆ ಎಂದರು.
ಶ್ರೀ ಪಂಜಂದಾಯ, ಬಂಟ, ವೈದ್ಯನಾಥ ಮತ್ತು ಕೊರಗತನಿಯ ಸೇವಾ ಟ್ರಸ್ಟ್ ನ ಜಗದೀಶ ಶೆಟ್ಟಿ, ಪ್ರವೀಣ್ ಶೆಟ್ಟಿ, ಊರಿನ ಹರೀಶ್ ಪೂಜಾರಿ ಭಂಡಾರಬೈಲು, ದಿವ್ಯಜ್ಯೋತಿ ಕ್ರಿಕೆಟರ್ಸ್ ಪಂಡಿತ್ ಹೌಸ್ ಇದರ ಅಧ್ಯಕ್ಷ ಯತೀಶ್ ಶೆಟ್ಟಿ, ಮಹಿಳಾ ಮಂಡಳದ ಅಧ್ಯಕ್ಷೆ ರಮಣಿ ಶೆಟ್ಟಿ, ದಿವ್ಯಜ್ಯೋತಿ ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಪೂಜಾರಿ, ಕಾರ್ಯದರ್ಶಿ ರಂಗನಾಥ್, ಕೋಶಾಧಿಕಾರಿ ಸುನಿಲ್ ಕೆವಿ, ಮಹಿಳಾ ಮಂಡಲದ ಉಪಾಧ್ಯಕ್ಷೆ ಶಶಿಕಲಾ ಶೆಟ್ಟಿ, ಪ್ರಮೋದ್ ಪೂಜಾರಿ, ಎಸ್. ಆರ್ ಲಕ್ಷ್ಮಣ್ ಪೂಜಾರಿ, ಚಂದ್ರಹಾಸ್ ಮುಳಿಹಿತ್ಲು ಮೊದಲಾದವರು ಉಪಸ್ಥಿತರಿದ್ದರು.

