ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯ ಪಣಂಬೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 13 ಮಂದಿ ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದು, ಇವರ ಬಂಧನಕ್ಕೆ ಸಾರ್ವಜನಿಕರ ಸಹಕಾರ ಕೋರಲಾಗಿದೆ.

ಪಣಂಬೂರು ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 84/2026ರಲ್ಲಿ ಭಾರತೀಯ ನ್ಯಾಯ ಸಂಹಿತೆ (BNS-2023) ಕಲಂ 310(2), 311, 324(2), 137(2), 126(2) ಹಾಗೂ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (KPDLP Act) ಕಲಂ 2(b) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಲೆಮರೆಸಿಕೊಂಡಿರುವ ಆರೋಪಿಗಳಲ್ಲಿ ಶಿಜಿನ್ ಗಂಗಾಧರನ್, ಶ್ರೀರಾಗ್ ಪಾಲೊಟ್ಟುಕಾವಿಲ್, ಉಬೈದ್ ಎಂ.ಎನ್., ಫಿರೋಜ್ ಮೊಯ್ದು ಅಬ್ಬಾಸ್, ಅತುಲ್, ಮಿಥುಲ್ ಲಾಲ್ ವಿ., ಝಿಯಾದ್, ಅಜೀರ್ ತರಾಯಿಲ್ ಪೀಡಿಕೆಯಿಲ್, ಜಮೀರ್ ಅಲೀರಾ ಅಬ್ದುಲ್ಲಾ, ವೈಶಾಕ್, ಅಸೀರ್, ಪ್ರಣವ್ ಹಾಗೂ ವಿಜಿಲ್ ಸೇರಿದ್ದಾರೆ. ಆರೋಪಿಗಳು ಕರ್ನಾಟಕ ಹಾಗೂ ಕೇರಳ ರಾಜ್ಯಗಳ ವಿವಿಧ ಪ್ರದೇಶಗಳ ನಿವಾಸಿಗಳಾಗಿದ್ದಾರೆ.
ಈ ಆರೋಪಿಗಳ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ ಪಣಂಬೂರು ಪೊಲೀಸ್ ಠಾಣೆ ಅಥವಾ ಮಂಗಳೂರು ನಗರ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಮಾಹಿತಿ ನೀಡಿದವರಿಗೆ ಸೂಕ್ತ ಬಹುಮಾನ ನೀಡಲಾಗುವುದು ಹಾಗೂ ಮಾಹಿತಿ ನೀಡಿದವರ ಗುರುತನ್ನು ಸಂಪೂರ್ಣ ಗೌಪ್ಯವಾಗಿಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ನೀಡಲು ಸಂಪರ್ಕಿಸಿ:
- ಪೊಲೀಸ್ ಇನ್ಸ್ಪೆಕ್ಟರ್, ಪಣಂಬೂರು ಪೊಲೀಸ್ ಠಾಣೆ – 9480805331
- ಪೊಲೀಸ್ ಉಪನಿರೀಕ್ಷಕರು, ಪಣಂಬೂರು ಪೊಲೀಸ್ ಠಾಣೆ – 9480805355
- ಪಣಂಬೂರು ಪೊಲೀಸ್ ಠಾಣೆ – 0824-2220530
- ಮಂಗಳೂರು ನಗರ ಪೊಲೀಸ್ ನಿಯಂತ್ರಣ ಕೊಠಡಿ – 9480802300 / 0824-2222800

