Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಯುವವಾಹಿನಿ ಗ್ರಾಮಚಾವಡಿ-ಕೊಣಾಜೆ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ; ಪ್ರತಿಭಾವಂತರಿಗೆ ಪುರಸ್ಕಾರ

UllalaVaniBy UllalaVaniJuly 6, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕೊಣಾಜೆ: ಯಾವುದೇ ಸಂಘಟನೆಯ ಅಧ್ಯಕ್ಷ ಸ್ಥಾನವು ಮುಳ್ಳಿನ ಮೇಲಿನ ನಡಿಗೆಯಂತಿದ್ದು, ಎಲ್ಲರ ಸಹಕಾರದೊಂದಿಗೆ ಸಂಘಟನೆಯನ್ನು ಮುನ್ನಡೆಸಿದಾಗ ಮಾತ್ರ ಯಶಸ್ವಿ ನಾಯಕತ್ವ ಸಾಧ್ಯವಾಗುತ್ತದೆ. ಸಂಘಟನೆಗೆ ಸಲ್ಲಿಸಿದ ಸೇವೆಗೆ ಪ್ರತಿಫಲ ನಿರೀಕ್ಷಿಸದೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಯುವವಾಹಿನಿ ಗ್ರಾಮಚಾವಡಿ-ಕೊಣಾಜೆ ಘಟಕದ ಅಧ್ಯಕ್ಷ ಬಾಬು ಬಂಗೇರ ಹೇಳಿದರು.

ಅವರು ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಗ್ರಾಮಚಾವಡಿ-ಕೊಣಾಜೆ ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕವಿತಾ ಸನಿಲ್ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವವಾಹಿನಿಯ 35ಕ್ಕೂ ಅಧಿಕ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಸಂಘಟನೆಗೆ ಸ್ವಂತ ಕಟ್ಟಡ ನಿರ್ಮಾಣವಾಗಬೇಕಿದೆ. ಸಮಾಜದಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವು ನೀಡುವ ಕಾರ್ಯಗಳಿಗೆ ಸಂಘಟನೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಿಯೋಜಿತ ಅಧ್ಯಕ್ಷ ಮುರಳಿ ಕೊಣಾಜೆ ಹಾಗೂ ನೂತನ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ವಿಭಾಗದ ಅಧ್ಯಕ್ಷ ಪ್ರೊ. ಭೋಜ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸ್ವಉದ್ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳಾ ಸದಸ್ಯರಾದ ರವಿಕಲಾ ಜಗದೀಶ್ ಕೋಟ್ಯಾನ್ ಹಾಗೂ ಆಶಾ ಪ್ರವೀಣ್ ಅವರಿಗೆ ಸಾಧನಾ ಪುರಸ್ಕಾರ ಪ್ರದಾನಿಸಲಾಯಿತು. ಇದೇ ವೇಳೆ ಎರಡು ಮಕ್ಕಳ ಅನಾಥಾಶ್ರಮಗಳಿಗೆ ಆರ್ಥಿಕ ನೆರವು ಹಾಗೂ ಅಗತ್ಯ ಸಾಮಗ್ರಿಗಳನ್ನು ವಿತರಿಸಲಾಯಿತು.

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಗ್ರಾಮಚಾವಡಿ-ಕೊಣಾಜೆ ಅಧ್ಯಕ್ಷ ವಿಜೇತ್ ಪಜೀರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಗಳೂರು ಬಿಲ್ಲವ ಬ್ರಿಗೇಡ್ ಸಂಸ್ಥಾಪಕ ಸದಾನಂದ ಪೂಜಾರಿ, ಉದ್ಯಮಿ ನಿಶಾನ್ ಪೂಜಾರಿ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಆಶೋಕ್ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಯುವವಾಹಿನಿ ಗ್ರಾಮಚಾವಡಿ-ಕೊಣಾಜೆ ಘಟಕದ ಉಪಾಧ್ಯಕ್ಷ ಅಜಿತ್ ಪೂಜಾರಿ ಸ್ವಾಗತಿಸಿದರು. ಕಾರ್ಯದರ್ಶಿ ಮಿಥುನ್ ಪಜೀರ್ ವಾರ್ಷಿಕ ವರದಿ ವಾಚಿಸಿದರು. ಸ್ಥಾಪಕಾಧ್ಯಕ್ಷ ಹರೀಶ್ ಪೂಜಾರಿ ಕೊಣಾಜೆ ನೂತನ ಪದಾಧಿಕಾರಿಗಳನ್ನು ಘೋಷಿಸಿದರು. ಕೇಂದ್ರ ಸಮಿತಿ ಅಧ್ಯಕ್ಷ ಎನ್. ಅಶೋಕ್ ಕುಮಾರ್ ಪಡ್ಪು ಪ್ರತಿಜ್ಞಾವಿಧಿ ಬೋಧಿಸಿದರು. ನಿಯೋಜಿತ ಕಾರ್ಯದರ್ಶಿ ಆಶಾ ಪ್ರವೀಣ್ ವಂದಿಸಿದರು. ಸುರೇಖ ಎಚ್. ಪೂಜಾರಿ, ಹರ್ಷಿತಾ ಹಾಗೂ ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬಂಟ್ವಾಳ: ಹೆದ್ದಾರಿಯಲ್ಲಿ ಕಾರು-ಬೈಕ್ ಮುಖಾಮುಖಿ; ಬೈಕ್ ಸವಾರ ಸಾವು…!

July 6, 2026

ವಾಸುಕಿ ಫ್ರೆಂಡ್ಸ್ (ರಿ) ಚಿತ್ರಾಂಜಲಿ ನಗರ ಇದರ ದೃಶ್ಯರೂಪಕದ ಆಮಂತ್ರಣ ಪತ್ರಿಕೆ ಬಿಡುಗಡೆ

July 6, 2026

ಮಂಗಳೂರು: ದರೋಡೆ ಪ್ರಕರಣದ 13 ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದು, ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ

July 6, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
BANTWALA

ಬಂಟ್ವಾಳ: ಹೆದ್ದಾರಿಯಲ್ಲಿ ಕಾರು-ಬೈಕ್ ಮುಖಾಮುಖಿ; ಬೈಕ್ ಸವಾರ ಸಾವು…!

By UllalaVaniJuly 6, 20260

ಬಂಟ್ವಾಳ: ಬಂಟ್ವಾಳ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ…

ಯುವವಾಹಿನಿ ಗ್ರಾಮಚಾವಡಿ-ಕೊಣಾಜೆ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ; ಪ್ರತಿಭಾವಂತರಿಗೆ ಪುರಸ್ಕಾರ

July 6, 2026

ವಾಸುಕಿ ಫ್ರೆಂಡ್ಸ್ (ರಿ) ಚಿತ್ರಾಂಜಲಿ ನಗರ ಇದರ ದೃಶ್ಯರೂಪಕದ ಆಮಂತ್ರಣ ಪತ್ರಿಕೆ ಬಿಡುಗಡೆ

July 6, 2026

ಮಂಗಳೂರು: ದರೋಡೆ ಪ್ರಕರಣದ 13 ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದು, ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ

July 6, 2026
1 2 3 … 2,002 Next
Automatic YouTube Gallery

ಕೊಣಾಜೆ ವಿವಿದೋದ್ಧೇಶ ಸಹಕಾರಿ ಸಂಘದಿAದ ಸಚಿವ ಯು.ಟಿ.ಖಾದರ್‌ಗೆ ಗೌರವಾಭಿನಂದನೆ

ಕೊಣಾಜೆ ವಿವಿದೋದ್ಧೇಶ ಸಹಕಾರಿ ಸಂಘದ ವತಿಯಿಂದ;ಸಚಿವ ಯು.ಟಿ.ಖಾದರ್ ಅವರಿಗೆ ಗೌರವಾಭಿನಂದನೆ

ಶ್ರೀಘ್ರದಲ್ಲೇ ಅಸೈಗೋಳಿಯಲ್ಲಿ ಮಿನಿ ಸ್ಟೇಡಿಯಂ; ಸಚಿವ ಯು.ಟಿ.ಖಾದರ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೊಣಾಜೆ ವಿವಿದೋದ್ಧೇಶ ಸಹಕಾರಿ ಸಂಘದಿAದ ಸಚಿವ ಯು.ಟಿ.ಖಾದರ್‌ಗೆ ಗೌರವಾಭಿನಂದನೆ
Now Playing
ಕೊಣಾಜೆ ವಿವಿದೋದ್ಧೇಶ ಸಹಕಾರಿ ಸಂಘದಿAದ ಸಚಿವ ಯು.ಟಿ.ಖಾದರ್‌ಗೆ ಗೌರವಾಭಿನಂದನೆ
ಕೊಣಾಜೆ ವಿವಿದೋದ್ಧೇಶ ಸಹಕಾರಿ ಸಂಘದ ವತಿಯಿಂದ;ಸಚಿವ ಯು.ಟಿ.ಖಾದರ್ ಅವರಿಗೆ ...
ಕೊಣಾಜೆ ವಿವಿದೋದ್ಧೇಶ ಸಹಕಾರಿ ಸಂಘದ ವತಿಯಿಂದ;ಸಚಿವ ಯು.ಟಿ.ಖಾದರ್ ಅವರಿಗೆ ಗೌರವಾಭಿನಂದನೆ

ಶ್ರೀಘ್ರದಲ್ಲೇ ಅಸೈಗೋಳಿಯಲ್ಲಿ ಮಿನಿ ಸ್ಟೇಡಿಯಂ; ಸಚಿವ ಯು.ಟಿ.ಖಾದರ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಭಾವಬಿಂಬ' ಕುಟುಂಬದ ಮೌಲ್ಯವನ್ನು ವಿಸ್ತರಿಸುವ ಮೌಲಿಕ ಕೃತಿ; ಡಾ.ಎಂ.ಮೋಹನ್ ಆಳ್ವ
Now Playing
ಭಾವಬಿಂಬ' ಕುಟುಂಬದ ಮೌಲ್ಯವನ್ನು ವಿಸ್ತರಿಸುವ ಮೌಲಿಕ ಕೃತಿ; ಡಾ.ಎಂ.ಮೋಹನ್ ಆಳ್ವ
ವಿಜಯಲಕ್ಷ್ಮೀ ಪಿ ರೈರವರ "ಭಾವಬಿಂಬ" ಕವನ ಸಂಕಲನ ಲೋಕಾರ್ಪಣೆ ;ಅಡ್ಯಾರ್ ...
ವಿಜಯಲಕ್ಷ್ಮೀ ಪಿ ರೈರವರ "ಭಾವಬಿಂಬ" ಕವನ ಸಂಕಲನ ಲೋಕಾರ್ಪಣೆ ;ಅಡ್ಯಾರ್ ಗಾರ್ಡನ್‌ನಲ್ಲಿ ಬಿಡುಗಡೆಗೊಳಿಸಿದ ಡಾ.ಎಂ.ಮೋಹನ್ ಆಳ್ವ

`ಭಾವಬಿಂಬ' ಕುಟುಂಬದ ಮೌಲ್ಯವನ್ನು ವಿಸ್ತರಿಸುವ ಮೌಲಿಕ ಕೃತಿ; ಡಾ.ಎಂ.ಮೋಹನ್ ಆಳ್ವ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version