Site icon Ullalavani

ವಿಟ್ಲ: 3 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ದಸ್ತಗಿರಿ

ವಿಟ್ಲ, ಜು. 08: 3 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಜು. 6ರಂದು ದಸ್ತಗಿರಿ ಮಾಡಿದ್ದಾರೆ.

ಬೆಳ್ತಂಗಡಿ ನಿವಾಸಿ ರಾಜೇಶ್ (41) ದಸ್ತಗಿರಿ ಮಾಡಲಾದ ಆರೋಪಿ.ವಿಟ್ಲ ಪೊಲೀಸ್ ಠಾಣಾ ಅ.ಕ್ರ ನಂ: 204/2018  Se. 379 IPC ಐಪಿಸಿ ಪ್ರಕರಣದ ಆರೋಪಿಯಾಗಿರುವ ಈತನು ನ್ಯಾಯಾಲಯಕ್ಕೆ ವಿಚಾರಣೆ ಹಾಜರಾಗದೇ ೦೩ ವರ್ಷದಿಂದ ತಲೆಮರೆಸಿಕೊಂಡಿದ್ದ.ಆರೋಪಿಯನ್ನು ವಿಟ್ಲ ಠಾಣಾ ಸಿಬ್ಬಂದಿಗಳಾದ ASI ಜಯರಾಮ, CPC ವೆಂಕಪ್ಪ ಹಾಗೂ CPC ಶಿವಾನಂದ ಅವರು ಜು.6 ರಂದು ಮಂಗಳೂರಿನಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

Exit mobile version