ಉಳ್ಳಾಲ, ಜು. 8: ಮಹಾತ್ಮ ಗಾಂಧಿ ಕಿನ್ಯಾ ಗ್ರಾಮ ಪಂಚಾಯತ್‌ನ ಪಂಚಾಯತ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಯಾಗುತ್ತಿರುವ ವಾಣಿಶ್ರೀ ಅವರಿಗೆ ಪಂಚಾಯತ್ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಆಡಳಿತಾಧಿಕಾರಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ವಾಣಿಶ್ರೀ ಅವರು ತಮ್ಮ ಸೇವಾ ಅವಧಿಯಲ್ಲಿ ಗ್ರಾಮ ಪಂಚಾಯತ್‌ನ ಅಭಿವೃದ್ಧಿ, ಆಡಳಿತ ಹಾಗೂ ಸಾರ್ವಜನಿಕ ಸೇವೆಯಲ್ಲಿ ಸಲ್ಲಿಸಿದ ಪ್ರಾಮಾಣಿಕ ಕಾರ್ಯ ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪಂಚಾಯತ್ ಸಿಬ್ಬಂದಿ ವರ್ಗದ ಪರವಾಗಿ, “ನಿಮ್ಮ ಸೇವೆ, ಸಹಕಾರ ಮತ್ತು ಶ್ರಮವು ನಮ್ಮ ಗ್ರಾಮ ಪಂಚಾಯತ್‌ಗೆ ಸದಾ ಸ್ಮರಣೀಯ. ನಿಮ್ಮ ಮುಂದಿನ ಜೀವನ ಸುಖ, ಶಾಂತಿ ಹಾಗೂ ಸಫಲತೆಯಿಂದ ಕೂಡಿರಲಿ” ಎಂದು ಶುಭ ಹಾರೈಸಲಾಯಿತು.
ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದು, ವಾಣಿಶ್ರೀ ಅವರನ್ನು ಸನ್ಮಾನಿಸಿ ಗೌರವಪೂರ್ವಕವಾಗಿ ಬೀಳ್ಕೊಡಲಾಯಿತು.

