Site icon Ullalavani

ವಯನಾಡು ಭೂಕುಸಿತ ದುರಂತ: ಮೃತರ ಸಂಖ್ಯೆ 6ಕ್ಕೆ ಏರಿಕೆ

ವಯನಾಡು, ಜು. 10: ಕೇರಳದ ವಯಾನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದ ದುರಂತ ಸ್ಥಳದಿಂದ ಗುರುವಾರ ಮೂರು ಶವವನ್ನು ಹೊರತೆಗೆಯಲಾಗಿದ್ದು, ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಈ ಬಗ್ಗೆ ಕೇರಳ ಸಚಿವರಾದ ಎ.ಪಿ.ಅನಿಲ್ ಕುಮಾರ್ ಮತ್ತು ಟಿ.ಸಿದ್ದಿಕ್ ಮಾಹಿತಿ ನೀಡಿದ್ದು, “ಶೋಧ ಕಾರ್ಯಾಚರಣೆಯ ವಲಯ 1ರಲ್ಲಿ ಇಂದು ಬೆಳಗ್ಗೆ ಒಂದು ಶವ ಪತ್ತೆಯಾಗಿದೆ. ಮತ್ತೊಂದು ಶವ ದುರಂತ ಸ್ಥಳದ ಸಮೀಪ ಹರಿಯುವ ನದಿಯಲ್ಲಿ ಪತ್ತೆಯಾಗಿದೆ. ಸದ್ಯ ವಲಯ 1 ಮತ್ತು 2ರಲ್ಲಿ ಹಾಗೂ ನದಿಯ ಆಸುಪಾಸಿನಲ್ಲಿ ಶೋಧ ಕಾರ್ಯವನ್ನು ತೀವ್ರಗೊಳಿಸಲಾಗಿದೆ” ಎಂದಿದ್ದಾರೆ.”ಪತ್ತೆಯಾದ ಮೃತದೇಹಗಳನ್ನು ಉತ್ತರ ಪ್ರದೇಶದ ಸರ್ವೇಯರ್ ಅಜರುದ್ದೀನ್ ಅನ್ಸಾರಿ, ಹಿಮಾಚಲ ಪ್ರದೇಶದ ಎಂಜಿನಿಯರ್ ರಾಹುಲ್ ಶರ್ಮಾ ಹಾಗೂ ಬಿಹಾರದ ಆಪರೇಟರ್ ಮೊಹಮ್ಮದ್ ಇಮ್ರಾನ್ ಎಂದು ಗುರುತಿಸಲಾಗಿದೆ. ಸದ್ಯ ಮೃತದೇಹಗಳನ್ನು ವೈತಿರಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಬಳಿಕ ಅವುಗಳನ್ನು ಕೋಝಿಕ್ಕೋಡ್ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಇಡಲಾಗುವುದು” ಎಂದು ತಿಳಿಸಿದ್ದಾರೆ.

Exit mobile version