ಕಡಬ, ಜು.10: ಸುಬ್ರಹ್ಮಣ್ಯ ಸಮೀಪದ ಅಜ್ಜಿಹಿತ್ಲು ಪ್ರದೇಶದ ಖಾಸಗಿ ಲಾಡ್ಜ್‌ನಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ರಾಮನಗರ ಜಿಲ್ಲೆಯ ಉಚ್ಚಮ್ಮನ ದೊಡ್ಡಿ ನಿವಾಸಿ ಮಧು ಎಸ್. (30) ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಮಧು ಎಸ್. ಅವರು ಜುಲೈ 8ರಂದು ಅಜ್ಜಿಹಿತ್ಲುವಿನ ಖಾಸಗಿ ಲಾಡ್ಜ್‌ನಲ್ಲಿ ಕೊಠಡಿ ಬಾಡಿಗೆಗೆ ಪಡೆದಿದ್ದರು. ಜುಲೈ 9ರಂದು ಸಂಜೆ ಲಾಡ್ಜ್ ಸಿಬ್ಬಂದಿ ಕೊಠಡಿ ಬಾಗಿಲು ತೆರೆಯುವಂತೆ ಹಲವು ಬಾರಿ ಕರೆದರೂ ಯಾವುದೇ ಪ್ರತಿಕ್ರಿಯೆ ದೊರಕಿಲ್ಲ. ಅನುಮಾನಗೊಂಡ ಸಿಬ್ಬಂದಿ ಕಿಟಕಿಯಿಂದ ಪರಿಶೀಲಿಸಿದಾಗ, ಕೊಠಡಿಯೊಳಗೆ ಮಧು ಎಸ್. ಅವರು ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡುಬಂದಿದೆ.
ಈ ಕುರಿತು ಲಾಡ್ಜ್‌ನ ಅರ್ಜಿದಾರ ಜಗದೀಶ್ ಶಾಪಪಡ್ಪು ಅವರು ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 15/2026 ದಾಖಲಿಸಲಾಗಿದೆ.