ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ತಾಲೂಕು ಘಟಕದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ಮಾದಕ ದ್ರವ್ಯಗಳ ದುರುಪಯೋಗ’ ವಿಷಯದ ಪ್ರಬಂಧ ಸ್ಪರ್ಧೆಯಲ್ಲಿ ಇರಾ ಗ್ರಾಮದ ಬಾಳೆಪುಣಿ ನಿವಾಸಿ ಹಾಗೂ ಪ್ರಸ್ತುತ ಕುಂಬ್ರದಲ್ಲಿ ಇಮಾಮರಾಗಿ ಸೇವೆ ಸಲ್ಲಿಸುತ್ತಿರುವ ಉಸ್ತಾದ್ ತ್ವಯ್ಯಿಬ್ ಮಳ್‌ಹರಿ ಅವರು ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧಿಕಾರಿಗಳು ಉಸ್ತಾದ್ ತ್ವಯ್ಯಿಬ್ ಮಳ್‌ಹರಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು. ಸಮಾಜದಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಈ ಸ್ಪರ್ಧೆಯಲ್ಲಿ ಅವರ ಪ್ರಬಂಧ ಅತ್ಯುತ್ತಮವೆಂದು ಆಯ್ಕೆಯಾಯಿತು.