Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಇಎಸ್‌ಐ ಆಸ್ಪತ್ರೆಗಳಲ್ಲಿ ₹10 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ: ಡಾ. ದಿನೇಶ್ ಕುಮಾರ್

UllalaVaniBy UllalaVaniJuly 13, 2026Updated:July 13, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ : ಇಎಸ್‌ಐ ಆಸ್ಪತ್ರೆಗಳಲ್ಲಿ ಇನ್ನಷ್ಟು ಆಧುನಿಕ ಸೌಲಭ್ಯಗಳನ್ನು ಕಲ್ಪಿಸುವುದು, ತಜ್ಞ ವೈದ್ಯರ ತಂಡಗಳನ್ನು ನಿಯೋಜಿಸುವುದು ಸೇರಿದಂತೆ ಆರೋಗ್ಯ ಸೇವೆಗಳನ್ನು ಬಲಪಡಿಸಲಾಗುತ್ತಿದೆ. ಸುಮಾರು ₹10 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಕಣಚೂರು ಆಸ್ಪತ್ರೆಯೊಂದಿಗೆ ಇನ್ನಷ್ಟು ಸಹಭಾಗಿತ್ವ ಬೆಳೆಸುವ ಉದ್ದೇಶವೂ ಇದೆ ಎಂದು ಕರ್ನಾಟಕ ಸರ್ಕಾರದ ನೌಕರರ ರಾಜ್ಯ ವಿಮಾ (ಇಎಸ್‌ಐ) ವೈದ್ಯಕೀಯ ಸೇವೆಗಳ ಆಯುಕ್ತರಾದ ಡಾ. ದಿನೇಶ್ ಕುಮಾರ್ ವೈ.ಕೆ. (ಐಎಫ್‌ಎಸ್) ಅಭಿಪ್ರಾಯಪಟ್ಟರು.

ಅವರು ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್ ವತಿಯಿಂದ ಸೋಮವಾರ ನಾಟೆಕಲ್ ಕಣಚೂರು ಸಭಾಂಗಣದಲ್ಲಿ ಆಯೋಜಿಸಲಾದ ಸಂಸ್ಥಾಪಕರ ದಿನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ನೌಕರರ ರಾಜ್ಯ ವಿಮಾ (ಇಎಸ್‌ಐ) ಯೋಜನೆಯು ಕೇಂದ್ರ ಸರ್ಕಾರದ ಅನುದಾನಿತ ಯೋಜನೆಯಾಗಿದ್ದು, ಇಎಸ್‌ಐ ಕಾರ್ಡ್ ಹೊಂದಿರುವ ಉದ್ಯೋಗಿಗಳಿಗೆ ಮಾತ್ರವಲ್ಲದೆ ಅವರ ಕುಟುಂಬ ಸದಸ್ಯರಿಗೂ ಸಂಪೂರ್ಣ ಉಚಿತ ವೈದ್ಯಕೀಯ ಸೇವೆಯನ್ನು ಒದಗಿಸುತ್ತದೆ. ಕರ್ನಾಟಕದಲ್ಲಿ ಸುಮಾರು 36.5 ಲಕ್ಷ ಇಎಸ್‌ಐ ಫಲಾನುಭವಿಗಳಿದ್ದು, ರಾಜ್ಯದ ಸುಮಾರು ಮೂರನೇ ಒಂದು ಭಾಗದ ಜನಸಂಖ್ಯೆ ಈ ಯೋಜನೆಯ ಪ್ರಯೋಜನ ಪಡೆಯುತ್ತಿದೆ ಎಂದು ತಿಳಿಸಿದರು.


ಏಕೈಕ ಕ್ಯಾಂಪಸ್‌ನಲ್ಲಿ ಯುಕೆಜಿಯಿಂದ ಸ್ನಾತಕೋತ್ತರ ಹಾಗೂ ವೈದ್ಯಕೀಯ ಶಿಕ್ಷಣದವರೆಗೆ ಅವಕಾಶ ಕಲ್ಪಿಸಿರುವ ಕಾರ್ಯವನ್ನು ಶ್ಲಾಘಿಸಿದರು.
ಸಂಸ್ಥೆಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಹಿರಿಯ ವಿದ್ಯಾರ್ಥಿಗಳು ಹಾಗೂ ವೈದ್ಯರನ್ನು ನೋಡಿ ಪ್ರೇರಣೆ ಪಡೆಯುವಂತಹ ಶೈಕ್ಷಣಿಕ ವಾತಾವರಣ ನಿರ್ಮಾಣವಾಗಿರುವುದು ಶ್ಲಾಘನೀಯ ಎಂದು ಹೇಳಿದರು.
ಹವಾಮಾನ ವೈಪರೀತ್ಯದ ಕುರಿತು ಮಾತನಾಡಿದ ಅವರು, ಎಲ್‌ನಿನೊ ಪರಿಣಾಮದಿಂದ ಈ ವರ್ಷ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದ್ದು, ಬರದ ಪರಿಸ್ಥಿತಿ ಎದುರಾಗಬಹುದು. ಪರಿಸರ ಹಾನಿಗೆ ಮಾನವ ನಿರ್ಲಕ್ಷ್ಯವೂ ಪ್ರಮುಖ ಕಾರಣವಾಗಿದ್ದು, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಕಣಚೂರು ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಸಲಹಾ ಸಮಿತಿ ಚೇರ್ಮೆನ್ ಹಾಗೂ ಕಣ್ಣೂರು ವಿಶ್ವವಿದ್ಯಾಲಯ ಹಾಗೂ ಕ್ಯಾಲಿಕಟ್ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಡಾ. ಎಂ. ಅಬ್ದುಲ್ ರಹಿಮಾನ್ ಮಾತನಾಡಿ ಮಕ್ಕಳು ಪ್ರಕೃತಿಯೊಂದಿಗೆ ನಿಕಟ ಸಂಪರ್ಕ ಹೊಂದಿ ಬೆಳೆಯಬೇಕು. ವನಮಹೋತ್ಸವವು ಕೇವಲ ಗಿಡ ನೆಡುವ ಕಾರ್ಯಕ್ರಮವಲ್ಲ; ಅದು ಜೀವನ ಮೌಲ್ಯಗಳನ್ನು ಕಲಿಸುವ ಪ್ರಾಯೋಗಿಕ ಪಾಠವಾಗಿದೆ.
2004ರಲ್ಲಿ ಈ ಆವರಣದಲ್ಲಿ ನೆಡಲಾಗಿದ್ದ ನಾಲ್ಕು ಸಸಿಗಳು ಇಂದು ಬೃಹತ್ ಹೆಮ್ಮರಗಳಾಗಿ ಬೆಳೆದಿರುವುದನ್ನು ಉದಾಹರಣೆಯಾಗಿ ಉಲ್ಲೇಖಿಸಿದ ಅವರು, ಸಣ್ಣ ಪ್ರಯತ್ನಗಳೇ ಭವಿಷ್ಯದಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಗುತ್ತವೆ ಎಂದು ಹೇಳಿದರು.

ಈ ಸಂದರ್ಭ ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್
ನಿರ್ದೇಶಕರು ಅಬ್ದುಲ್ ರಹಿಮಾನ್, ಟ್ರಸ್ಟಿಗಳಾದ ಸಾಹದಾ ರಹಿಮಾನ್, ಉಮಯಾ ಬಾನು ಆರಿಫ್, ಫರೀದಾ ನಸೀರ್ ಹಾಗೂ ಡಾ. ಅಬಿದಾ ಹಾಶಿಂ , ಕಣಚೂರು ಹೆಲ್ತ್ ಸೈನ್ಸಸ್ ಸಲಹಾ ಮಂಡಳಿ, ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ ಅಧ್ಯಕ್ಷರು ಡಾ. ಮೊಹಮ್ಮದ್ ಇಸ್ಮಾಯಿಲ್ ಹೆಜಮಾಡಿ, ಕಣಚೂರು ಹೆಲ್ತ್ ಸೈನ್ಸಸ್ ಸಲಹಾ ಮಂಡಳಿ ಸದಸ್ಯರು ಡಾ. ಎಂ. ವೆಂಕಟರಾಯ ಪ್ರಭು ಮುಖ್ಯ ಅತಿಥಿಗಳಾಗಿದ್ದರು. ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ರೋಹನ್ ಎಸ್. ಮೊನಿಸ್

ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ ಡೀನ್ ಡಾ. ಶಹ್ನವಾಝ್ ಮಣಿಪಾಡಿ ಸ್ವಾಗತಿಸಿದರು. ಮುಖ್ಯ ವೈದ್ಯಾಧಿಕಾರಿ, ಕಣಚೂರು ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ
ಪ್ರಾಂಶುಪಾಲರು ಡಾ. ವಿದ್ಯಾಪ್ರಭಾ ಆರ್ ವಂದಿಸಿದರು.

ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್‌ನ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ವಿವಿಧ ಗ್ರಾಮ ಪಂಚಾಯತ್‌ಗಳ ಸಹಯೋಗದಲ್ಲಿ ಆಯಾ ಪ್ರದೇಶಗಳಲ್ಲಿ ಒಟ್ಟು 500 ಗಿಡಗಳನ್ನು ನೆಡಲಾಯಿತು.
ಈ ಪರಿಸರ ಸ್ನೇಹಿ ಅಭಿಯಾನಕ್ಕೆ ಸಹಕರಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಕಣಚೂರು ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ನಿರಂತರವಾಗಿ ಬೆಂಬಲ ಹಾಗೂ ಸಹಕಾರ ನೀಡುತ್ತಿರುವ ಹಿತೈಷಿಗಳ ಸೇವೆಯನ್ನು ಸ್ಮರಿಸಿ ಅವರಿಗೆ ಕೃತಜ್ಞತೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಹಿತೈಷಿಗಳ ಪರವಾಗಿ ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಲಾಯಿತು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು : ಚಂಡೀಗಢದಲ್ಲಿ ಹಿಂದಿಯಲ್ಲಿ ಮೊಳಗಿದ ಕರಾವಳಿಯ ಯಕ್ಷಗಾನ!

October 12, 2026

ಕೊಲ್ಯದಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ: 146 ಸಾಕು ನಾಯಿಗಳಿಗೆ ಲಸಿಕೆ

October 12, 2026

ಮಂಗಳೂರು: ರಾತ್ರಿ ವೇಳೆ ರಾ. ಹೆದ್ದಾರಿಗಳಲ್ಲಿ ತೃತೀಯಲಿಂಗಿಗಳು ಗುಂಪು ಸೇರುವುದನ್ನ ತಡೆಯಲು ಡಿಸಿ ಸೂಚನೆ

October 10, 2026

Comments are closed.

Advertise
ಸಂಪರ್ಕಿಸಿ

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026

ಇನ್ನುಂದೆ ಕೃತಕ ಪನೀರ್‌ಗೆ ಅನಲಾಗ್ ಪನೀರ್ ಎಂದು ಹೆಸರು ಬದಲಿಸುವಂತೆ ಕೇಂದ್ರ ನೋಟಿಫಿಕೇಷನ್

September 25, 2026
ದೇಶ

ವಿಮಾನದಿಂದಲೇ CJP ನಾಯಕರನ್ನು ವಶಕ್ಕೆ ಪಡೆದ ಪೊಲೀಸ್ ಕ್ರಮ: ಏರ್ ಇಂಡಿಯಾ ಸ್ಪಷ್ಟನೆ ಕೇಳಿದೆ

By UllalaVaniOctober 12, 20260

ನವದೆಹಲಿ, ಅಕ್ಟೋಬರ್ 11, 2026: ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ವಿಮಾನವೊಂದು ಬಂದಿಳಿದ ಬಳಿಕ, ಅದರೊಳಗಿದ್ದ ಕಾಕ್‌ರೋಚ್…

ಮಂಗಳೂರು : ಚಂಡೀಗಢದಲ್ಲಿ ಹಿಂದಿಯಲ್ಲಿ ಮೊಳಗಿದ ಕರಾವಳಿಯ ಯಕ್ಷಗಾನ!

October 12, 2026

ಕೊಲ್ಯದಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ: 146 ಸಾಕು ನಾಯಿಗಳಿಗೆ ಲಸಿಕೆ

October 12, 2026

ಮಂಗಳೂರು: ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಕುಳಾಯಿ ಆಯುಷ್ ಆರ್ ಕೆ. ನಾಯರ್ ಗೆ ಚಿನ್ನದ ಪದಕ

October 12, 2026
1 2 3 … 2,130 Next
Automatic YouTube Gallery

ಬರೋಬ್ಬರಿ 16 ವರ್ಷಗಳ ಬಳಿಕ ಕೊಂಡಾಣ ಅಂಗನವಾಡಿಗೆ ಶಾಶ್ವತ ಕಟ್ಟಡದ ಶಿಲಾನ್ಯಾಸ..!

ಕೊಂಡಾಣ ಅಂಗನವಾಡಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ;ಬಾಡಿಗೆ ಕಟ್ಟಡದಿಂದ ಸ್ವಂತ ಕಟ್ಟಡದತ್ತ ಕೊಂಡಾಣ ಅಂಗನವಾಡಿ

ಮನಮೋಹನ್ ಶೆಟ್ಟಿ ಅವರಿಂದ ಕೊಂಡಾಣ ಅಂಗನವಾಡಿ ಕಟ್ಟಡಕ್ಕೆ ಶಿಲಾನ್ಯಾಸ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಬರೋಬ್ಬರಿ 16 ವರ್ಷಗಳ ಬಳಿಕ ಕೊಂಡಾಣ ಅಂಗನವಾಡಿಗೆ ಶಾಶ್ವತ ಕಟ್ಟಡದ ಶಿಲಾನ್ಯಾಸ..!
Now Playing
ಬರೋಬ್ಬರಿ 16 ವರ್ಷಗಳ ಬಳಿಕ ಕೊಂಡಾಣ ಅಂಗನವಾಡಿಗೆ ಶಾಶ್ವತ ಕಟ್ಟಡದ ಶಿಲಾನ್ಯಾಸ..!
ಕೊಂಡಾಣ ಅಂಗನವಾಡಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ;ಬಾಡಿಗೆ ಕಟ್ಟಡದಿಂದ ಸ್ವಂತ ...
ಕೊಂಡಾಣ ಅಂಗನವಾಡಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ;ಬಾಡಿಗೆ ಕಟ್ಟಡದಿಂದ ಸ್ವಂತ ಕಟ್ಟಡದತ್ತ ಕೊಂಡಾಣ ಅಂಗನವಾಡಿ

ಮನಮೋಹನ್ ಶೆಟ್ಟಿ ಅವರಿಂದ ಕೊಂಡಾಣ ಅಂಗನವಾಡಿ ಕಟ್ಟಡಕ್ಕೆ ಶಿಲಾನ್ಯಾಸ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಾಣಿಲ ಶ್ರೀಧಾಮದಲ್ಲಿ ಶರನ್ನವರಾತ್ರಿ ಮಹೋತ್ಸವ ಆಚರಣೆ
Now Playing
ಮಾಣಿಲ ಶ್ರೀಧಾಮದಲ್ಲಿ ಶರನ್ನವರಾತ್ರಿ ಮಹೋತ್ಸವ ಆಚರಣೆ
ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ 9ದಿನಗಳ ಕಾಲ ವಿಶೇಷ ಪೂಜೆ, ಚಂಡಿಕಾ ...
ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ 9ದಿನಗಳ ಕಾಲ ವಿಶೇಷ ಪೂಜೆ, ಚಂಡಿಕಾ ಹೋಮ;ಪೂಜ್ಯ ಮೋಹನದಾಸ ಪರಮಹಂಸ ಸ್ವಾಮೀಜಿ ಸಾನ್ನಿಧ್ಯದಲ್ಲಿ ನವರಾತ್ರಿ ಧಾರ್ಮಿಕ ಕಾರ್ಯಕ್ರಮಗಳು

ವಿಜೃಂಭಣೆಯಿoದ ವಿಜಯದಶಮಿ ಆಚರಣೆ: ಮಾಣಿಲ ಕ್ಷೇತ್ರದಲ್ಲಿ ಭಕ್ತರ ಸಮಾಗಮ

📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version