Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ – ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ

UllalaVaniBy UllalaVaniJuly 15, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು, ಜು. 14 : ನಗರದ ಕೊಡ್ಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಹೊರಗಿನಿಂದ ಮೊಬೈಲ್‌ ಫೋನ್‌ಗಳು, ಮಾದಕ ವಸ್ತುಗಳು ಹಾಗೂ ಇತರ ನಿಷೇಧಿತ ಸಾಮಗ್ರಿಗಳನ್ನು ಎಸೆಯುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸುವ ಉದ್ದೇಶದಿಂದ ಜೈಲಿನ ಆವರಣ ಗೋಡೆಯ ಮೇಲ್ಭಾಗದಲ್ಲಿ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಸುವ ಕಾಮಗಾರಿ ಆರಂಭವಾಗಿದೆ.

ಕಾರಾಗೃಹ ಇಲಾಖೆಯ ರೂ. 50 ಲಕ್ಷ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆ ಈ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು, ಟೆಂಡರ್‌ ಸೇರಿದಂತೆ ವಿವಿಧ ಆಡಳಿತಾತ್ಮಕ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಕಳೆದ ಕೆಲ ದಿನಗಳಿಂದ ಕಾಮಗಾರಿ ಆರಂಭವಾಗಿದೆ. ಪ್ರಸ್ತುತ ಜೈಲಿನ ಸುತ್ತ ಸುಮಾರು 15 ಅಡಿ ಎತ್ತರದ ಕಲ್ಲಿನ ಆವರಣ ಗೋಡೆ ಹಾಗೂ ಅದರ ಮೇಲ್ಭಾಗದಲ್ಲಿ ಸುಮಾರು ಎರಡು ಅಡಿ ತಂತಿ ಬೇಲಿ ಇದೆ. ಆದರೂ ಕೆಲವರು ಹೊರ ರಸ್ತೆಯಲ್ಲಿ ನಿಂತು ಗಾಂಜಾ, ಮೊಬೈಲ್‌ ಹಾಗೂ ಇತರ ವಸ್ತುಗಳನ್ನು ಪ್ಲಾಸ್ಟಿಕ್‌ ಪೊಟ್ಟಣಗಳಲ್ಲಿ ಕಲ್ಲು ಕಟ್ಟಿ ಜೈಲಿನೊಳಗೆ ಎಸೆಯುತ್ತಿರುವ ಘಟನೆಗಳು ಪದೇ ಪದೇ ವರದಿಯಾಗುತ್ತಿವೆ.ಹೊಸದಾಗಿ ನಿರ್ಮಿಸಲಾಗುತ್ತಿರುವ ತಂತಿ ಬೇಲಿ ಗೋಡೆಯ ಮೇಲಿನಿಂದ ಸುಮಾರು 12 ಅಡಿ ಎತ್ತರಕ್ಕೆ ವಿಸ್ತರಿಸಲಿದ್ದು, ಇದರ ಮೂಲಕ ಯಾವುದೇ ವಸ್ತುವನ್ನು ಒಳಗೆ ಎಸೆಯುವುದು ಬಹುತೇಕ ಅಸಾಧ್ಯವಾಗಲಿದೆ. ಜತೆಗೆ ತಂತಿಯ ಜಾಲರಿಗಳು ಅತಿ ಸಣ್ಣದಾಗಿರುವುದರಿಂದ ಸಣ್ಣ ಕಲ್ಲು ಸಹ ಒಳ ಪ್ರವೇಶಿಸಲು ಅವಕಾಶ ಇರುವುದಿಲ್ಲ ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕ ಶರಣ ಬಸಪ್ಪ ತಿಳಿಸಿದ್ದಾರೆ.ಜೈಲಿನ ಹೊರ ಆವರಣದ ಭದ್ರತೆಯನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್‌) ಸಿಬ್ಬಂದಿಗೆ ವಹಿಸಲಾಗಿದೆ. ಜೈಲಿಗೆ ಪ್ರವೇಶಿಸುವ ಪ್ರತಿಯೊಬ್ಬರನ್ನೂ ಕಡ್ಡಾಯವಾಗಿ ತಪಾಸಣೆ ನಡೆಸಿದ ಬಳಿಕವೇ ಒಳಗೆ ಬಿಡಲಾಗುತ್ತಿದೆ. ಅಕ್ರಮವಾಗಿ ಮೊಬೈಲ್‌, ಮಾದಕ ವಸ್ತುಗಳು ಹಾಗೂ ಇತರ ನಿಷೇಧಿತ ವಸ್ತುಗಳನ್ನು ಜೈಲಿನೊಳಗೆ ಸಾಗಿಸಲು ಯತ್ನಿಸಿದ ಹಲವರನ್ನು ಕೆಎಸ್‌ಐಎಸ್‌ಎಫ್‌ ಸಿಬ್ಬಂದಿ ಈಗಾಗಲೇ ಪತ್ತೆಹಚ್ಚಿ ಕ್ರಮ ಕೈಗೊಂಡಿದ್ದಾರೆ.210 ಕೈದಿಗಳ ಸಾಮರ್ಥ್ಯ ಹೊಂದಿರುವ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಜುಲೈ 11ರ ಅಂಕಿಅಂಶಗಳ ಪ್ರಕಾರ 369 ಮಂದಿ ಕೈದಿಗಳು ಇದ್ದಾರೆ. ಸ್ಥಳಾವಕಾಶದ ಕೊರತೆಯಿಂದ 100ಕ್ಕೂ ಹೆಚ್ಚು ಕೈದಿಗಳನ್ನು ಶಿವಮೊಗ್ಗ ಸೇರಿದಂತೆ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರಿಸಲಾಗಿದೆ. ಜೈಲಿನಲ್ಲಿರುವ ಕೈದಿಗಳಲ್ಲಿ ಶೇ.50ರಿಂದ 60ರಷ್ಟು ಮಂದಿ ಮಾದಕ ವ್ಯಸನಿಗಳಾಗಿದ್ದು, ಅವರು ವಿವಿಧ ಮಾರ್ಗಗಳ ಮೂಲಕ ಮಾದಕ ವಸ್ತುಗಳನ್ನು ಜೈಲಿನೊಳಗೆ ತರಿಸಿಕೊಳ್ಳಲು ಯತ್ನಿಸುತ್ತಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಕಾರಾಗೃಹ ಅಧಿಕಾರಿಗಳು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ರಾಜ್ಯದ 32 ಜನರಲ್ಲಿ ಕೊರೋನಾ ಸೋಂಕು ದೃಢ; ಹೆಚ್ಚಿದ ಆತಂಕ

July 15, 2026

ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ನೈತಿಕ ಪೊಲೀಸ್‌ಗಿರಿ- ಐವರ ವಿರುದ್ಧ ಪ್ರಕರಣ ದಾಖಲು

July 14, 2026

ಕಾಸರಗೋಡು : ಮಂಜೇಶ್ವರದಲ್ಲಿ ನಿಯಮ ಗಾಳಿಗೆ ತೂರಿ ಅಪಾಯಕಾರಿ ಈಜು – ಪೊಲೀಸರ ದಾಳಿ

July 14, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ – ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ

By UllalaVaniJuly 15, 20260

ಮಂಗಳೂರು, ಜು. 14 : ನಗರದ ಕೊಡ್ಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಹೊರಗಿನಿಂದ ಮೊಬೈಲ್‌ ಫೋನ್‌ಗಳು, ಮಾದಕ ವಸ್ತುಗಳು ಹಾಗೂ ಇತರ ನಿಷೇಧಿತ…

ರಾಜ್ಯದ 32 ಜನರಲ್ಲಿ ಕೊರೋನಾ ಸೋಂಕು ದೃಢ; ಹೆಚ್ಚಿದ ಆತಂಕ

July 15, 2026

ಜು.17ರಂದು ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿರುವ ಸೈಬರ್ ಕ್ರೈಂ ಕುರಿತ ಭಾವನಾತ್ಮಕ ಥ್ರಿಲ್ಲರ್ ಚಿತ್ರ ʻಅಚ್ಚುತ ಅವತಾರಂ ʼಮಂಗಳೂರಿನ ಬಿಗ್ ಸಿನಿಮಾಸ್‌ನಲ್ಲಿ ನಿರ್ಮಾಪಕ ರುದ್ರಮೂರ್ತಿ ಮಾಹಿತಿ

July 14, 2026

ಕಲ್ಲಾಪು ಬುರ್ದುಗೋಳಿ ಕ್ಷೇತ್ರದಲ್ಲಿ ಹರಕೆ ಕೋಲ ತೀರಿಸಿದ ಮಾಜಿ ಸಚಿವ ವಿ.ಸುನಿಲ್‌ ಕುಮಾರ್‌

July 14, 2026
1 2 3 … 2,016 Next
Automatic YouTube Gallery

ಸೈಬರ್ ಕ್ರೈಮ್ ಥ್ರಿಲ್ಲರ್ 'ಅಚ್ಯುತ ಅವತಾರಂ'ಗೆ ಕೌಂಟ್‌ಡೌನ್ ಆರಂಭ..!

ಡಿಜಿಟಲ್ ಜಗತ್ತು-ದೈವಿಕ ಶಕ್ತಿಯ ರೋಚಕ ಸಂಗಮ 'ಅಚ್ಯುತ ಅವತಾರಂ'; ಜುಲೈ 17ರಿಂದ ಚಿತ್ರಮಂದಿರಗಳಲ್ಲಿ!

ಬಹುಭಾಷೆಗಳಲ್ಲಿ ಬರುತ್ತಿದೆ 'ಅಚ್ಯುತ ಅವತಾರಂ'

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸೈಬರ್ ಕ್ರೈಮ್ ಥ್ರಿಲ್ಲರ್ 'ಅಚ್ಯುತ ಅವತಾರಂ'ಗೆ ಕೌಂಟ್‌ಡೌನ್ ಆರಂಭ..!
Now Playing
ಸೈಬರ್ ಕ್ರೈಮ್ ಥ್ರಿಲ್ಲರ್ 'ಅಚ್ಯುತ ಅವತಾರಂ'ಗೆ ಕೌಂಟ್‌ಡೌನ್ ಆರಂಭ..!
ಡಿಜಿಟಲ್ ಜಗತ್ತು-ದೈವಿಕ ಶಕ್ತಿಯ ರೋಚಕ ಸಂಗಮ 'ಅಚ್ಯುತ ಅವತಾರಂ'; ಜುಲೈ 17ರಿಂದ ...
ಡಿಜಿಟಲ್ ಜಗತ್ತು-ದೈವಿಕ ಶಕ್ತಿಯ ರೋಚಕ ಸಂಗಮ 'ಅಚ್ಯುತ ಅವತಾರಂ'; ಜುಲೈ 17ರಿಂದ ಚಿತ್ರಮಂದಿರಗಳಲ್ಲಿ!

ಬಹುಭಾಷೆಗಳಲ್ಲಿ ಬರುತ್ತಿದೆ 'ಅಚ್ಯುತ ಅವತಾರಂ'

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
| Ullalavani| ಸೈಬರ್ ಕ್ರೈಮ್ ಥ್ರಿಲ್ಲರ್ 'ಅಚ್ಯುತ ಅವತಾರಂ'; ಜುಲೈ 17ರಿಂದ ಚಿತ್ರಮಂದಿರಗಳಲ್ಲಿ!
Now Playing
| Ullalavani| ಸೈಬರ್ ಕ್ರೈಮ್ ಥ್ರಿಲ್ಲರ್ 'ಅಚ್ಯುತ ಅವತಾರಂ'; ಜುಲೈ 17ರಿಂದ ಚಿತ್ರಮಂದಿರಗಳಲ್ಲಿ!
ಹೊಸ ಅನುಭವಕ್ಕೆ ಸಜ್ಜಾಗಿ... 'ಅಚ್ಯುತ ಅವತಾರಂ'!; ಸಾಂಪ್ರದಾಯಿಕ ಗ್ರಾಮ... ಆಧುನಿಕ ...
ಹೊಸ ಅನುಭವಕ್ಕೆ ಸಜ್ಜಾಗಿ... 'ಅಚ್ಯುತ ಅವತಾರಂ'!; ಸಾಂಪ್ರದಾಯಿಕ ಗ್ರಾಮ... ಆಧುನಿಕ ಸೈಬರ್ ಕ್ರೈಮ್!

ಈ ವಾರದ ಬಹುನಿರೀಕ್ಷಿತ ಸಿನಿಮಾ – 'ಅಚ್ಯುತ ಅವತಾರಂ'

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version