ಉಳ್ಳಾಲ, ಜು.16: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಉಳ್ಳಾಲ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಅವರು ವಿಧಾನಸೌಧದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡುವಂತೆ ಮುಖ್ಯಮಂತ್ರಿ ಅವರಿಗೆ ಆಹ್ವಾನ ನೀಡಿದ ಹನೀಫ್ ಹಾಜಿ, ದರ್ಗಾದ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಸಹಕಾರ ಹಾಗೂ ಅನುದಾನ ಒದಗಿಸುವಂತೆ ಮನವಿ ಮಾಡಿದರು.
ಮುಖ್ಯಮಂತ್ರಿಯವರು ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸುವ ಭರವಸೆ ನೀಡಿದರು ಎಂದು ತಿಳಿದುಬಂದಿದೆ.
ಈ ವೇಳೆ ಉಳ್ಳಾಲ ದರ್ಗಾ ಉಪಾಧ್ಯಕ್ಷ ಯು.ಎಂ. ಅಶ್ರಫ್ ಅಹ್ಮದ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ, ಕೋಶಾಧಿಕಾರಿ ನಾಝಿಂ ರಹ್ಮಾನ್ ಸೇರಿದಂತೆ ದರ್ಗಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.