Site icon Ullalavani

ವಿದ್ಯಾರ್ಥಿಗಳ ಜತೆಗೆ ಸರಳವಾಗಿ ಹುಟ್ಟುಹಬ್ಬ ಆಚರಿಸಿದ ಸಚಿವ ಖಾದರ್

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಹರೇಕಳ: ಸರಳ ವ್ಯಕ್ತಿತ್ವದ ರಾಜ್ಯ ಸರ್ಕಾರದ ಆರೋಗ್ಯ ಸಚಿವರಾದ ಯು.ಟಿ.ಖಾದರ್ ತಮ್ಮ 46 ನೇ ಹುಟ್ಟುಹಬ್ಬವನ್ನು ಹರೇಕಳದ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಜತೆಗೆ ಕೇಕ್ ತುಂಡರಿಸುವ ಮೂಲಕ ಸೋಮವಾರ ಆಚರಿಸಿದರು.

ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಸೌಜನ್ಯ ಸ್ಕೌಟ್ಸ್ ದಳ, ಶ್ರೀರಾಮಕೃಷ್ಣ ಪ್ರೌಢಶಾಲೆ, ಇದರ ಆಶ್ರಯದಲ್ಲಿ ದ.ಕ ಜಿಲ್ಲಾ ಮಟ್ಟದ ಆಹ್ವಾನಿತ ಶಾಲೆಗಳ ಸ್ಕೌಟ್ಸ್ -ಗೈಡ್ಸ್ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವಿನೂತನ ಶೈಲಿಯ ಸ್ಕೌಟ್ಸ್ -ಗೈಡ್ಸ್ ಪ್ರತಿಭೋತ್ಸವ-2015 ರಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅವರು ವಿದ್ಯಾರ್ಥಿಗಳು ಹಾಗೂ ಶಾಲಾ ಆಡಳಿತ ಮಂಡಳಿ ಆಯೋಜಿಸಿದ ಹುಟ್ಟುಹಬ್ಬದ ಆಚರಣೆಯಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳ ಮೂಲಕವೇ ಕೇಕನ್ನು ತುಂಡರಿಸಿ, ಅವರ ಕೈಯಿಂದಲೇ ತಿನ್ನುವ ಮೂಲಕ ವಿಶಿಷ್ಟವಾಗಿ ಆಚರಿಸಿದರು.

ಈವರೆಗೂ ಹುಟ್ಟುಹಬ್ಬವನ್ನು ಆಚರಿಸಿದವನಲ್ಲ. ಆಚರಿಸಿಯೂ ಗೊತ್ತಿಲ್ಲ. ಪ್ರೀತಿಪೂರ್ವಕವಾಗಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆಯೋಜಿಸಿದ ಹುಟ್ಟುಹಬ್ಬದ ಸರಳ ಸಂಭ್ರಮದಲ್ಲಿ ಪಾಲ್ಗೊಂಡಿರುವುದು ಸಂತಸವಾಗಿದೆ ಎಂದರು.

ಈ ಸಂದರ್ಭ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮುದಲೆಮಾರು ಪ್ರಹ್ಲಾದ್ ರೈ ಅಧ್ಯಕ್ಷತೆ ವಹಿಸಿದ್ದರು. ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯ ಸಂಚಾಲಕ ಜಯರಾಮ ಆಳ್ವ ಪೋಡಾರ್, ವಾಸುದೇವ ಬೋಳೂರು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ.ಕ.ಜಿಲ್ಲಾ ಆಯುಕ್ತ ಎನ್.ಜಿ.ಮೋಹನ್, ತಾಲೂಕು ಪಂಚಾಯಿತಿ ಸದಸ್ಯರಾದ ಮಹಮ್ಮದ್ ಮುಸ್ತಫಾ ಹರೇಕಳ, ಮಹಮ್ಮದ್ ಮೋನು, ಬೋಳಿಯಾರ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಆಚಾರ್ಯ, ಅಂಬ್ಲಮೊಗರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ರಫೀಕ್, ಪಾವೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಫಿರೋಜ್, ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೌಕತ್ ಅಲಿ, ಪಜೀರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸೀತಾರಾಮ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಶ್ರೀ ರಾಮಕøಷ್ಣ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕೆ.ರವೀಂದ್ರ ರೈ ಸ್ವಾಗತಿಸಿದರು. ಸಹಶಿಕ್ಷಕ ರವಿಶಂಕರ್ ಪ್ರಾರ್ಥಿಸಿದರು. ಸ್ಕೌಟ್ ಶಿಕ್ಷಕ ತ್ಯಾಗಂ ಹರೇಕಳ ಕಾರ್ಯಕ್ರಮ ನಿರೂಪಿಸಿದರು.

Exit mobile version