Site icon Ullalavani

ಕಾಂಗ್ರೆಸ್ ಮುಖಂಡೆಯ ತಾಯಿ ಭವಾನಿಯವರು ಅಲ್ಪಕಾಲದ ಅಸೌಖ್ಯದಿಂದ ನಿಧನ..!

ಉಳ್ಳಾಲ, ಜು.18: ತಲಪಾಡಿಯ 88 ವರ್ಷದ ಶ್ರೀಮತಿ ಭವಾನಿಯವರು ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಬೆಳಿಗ್ಗೆ ನಿಧನ ಹೊಂದಿದರು.

ಅವರು ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಹಾಗೂ ಕಾಂಗ್ರೆಸ್ ಮುಖಂಡೆ ಶ್ರೀಮತಿ ಸುರೇಖಾ ಚಂದ್ರಹಾಸ್ ಅವರ ತಾಯಿ. ಮೃತರು ಇಬ್ಬರು ಪುತ್ರಿಯರು, ಅಳಿಯಂದಿರು, ಮೂವರು ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಶ್ರೀಮತಿ ಭವಾನಿಯವರ ನಿಧನಕ್ಕೆ ಸಚಿವ ಯು.ಟಿ. ಖಾದರ್ ಸೇರಿದಂತೆ ವಿವಿಧ ರಾಜಕೀಯ, ಸಾಮಾಜಿಕ ಹಾಗೂ ಸಾರ್ವಜನಿಕ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿ, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

Exit mobile version