Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
BANTWALA

ಫರಂಗಿಪೇಟೆ ಬ್ಯಾಂಕ್ ಕಳ್ಳತನ ಯತ್ನ ಪ್ರಕರಣ: ಮಹತ್ವದ ಸುಳಿವು ಪತ್ತೆ; ವಿಶೇಷ ತಂಡದಿಂದ ತನಿಖೆ ಚುರುಕು

UllalaVaniBy UllalaVaniJuly 22, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಬಂಟ್ವಾಳ, ಜು. 22 : ಫರಂಗಿಪೇಟೆಯ ಬ್ಯಾಂಕ್‌ನಲ್ಲಿ ನಡೆದ ಕಳ್ಳತನ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಲಭಿಸಿದ್ದು, ತನಿಖೆ ಚುರುಕುಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಬಂಟ್ವಾಳ ಹೆಚ್ಚುವರಿ ಪೊಲೀಸ್ ಅಧೀಕ್ಷಕರ (ಎಎಸ್‌ಪಿ) ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಆರೋಪಿಗಳ ಪತ್ತೆಗೆ ತೀವ್ರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.ಜುಲೈ 12ರ ರಾತ್ರಿ ಫರಂಗಿಪೇಟೆಯ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ ನಡೆದಿತ್ತು. ದುಷ್ಕರ್ಮಿಗಳು ಕಟ್ಟಡದ ಮೇಲ್ಛಾವಣಿಯನ್ನು ಕೊರೆದು ಬ್ಯಾಂಕ್ ಒಳನುಗ್ಗಿದ್ದರು. ಆದರೆ ಬ್ಯಾಂಕ್‌ನ ಲಾಕರ್ ತೆರೆಯಲು ವಿಫಲರಾದ ಅವರು ಯಾವುದೇ ನಗದು ಅಥವಾ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡದೇ ಸ್ಥಳದಿಂದ ಪರಾರಿಯಾಗಿದ್ದರು.ಪ್ರಕರಣದ ತನಿಖೆಯನ್ನು ವಿವಿಧ ಆಯಾಮಗಳಲ್ಲಿ ನಡೆಸಿರುವ ಪೊಲೀಸರು ಹಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ತನಿಖೆಯ ವೇಳೆ ಮಹತ್ವದ ಸುಳಿವು ದೊರೆತ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡವನ್ನು ರಚಿಸಿ ತನಿಖೆ ಮುಂದುವರಿಸಲಾಗಿದೆ.ಘಟನೆ ನಡೆದ ದಿನದ ಮರುದಿನ ಎರಡನೇ ಶನಿವಾರದ ರಜೆ ಹಿನ್ನೆಲೆ ಬ್ಯಾಂಕ್ ಮುಚ್ಚಲಾಗಿತ್ತು. ಹೀಗಾಗಿ ಶನಿವಾರ ರಾತ್ರಿ ಮತ್ತು ಭಾನುವಾರದ ನಡುವಿನ ಅವಧಿಯಲ್ಲಿ ಕಳ್ಳತನ ಯತ್ನ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಈ ಹಿಂದೆ ನಡೆದ ತನಿಖೆಯಲ್ಲಿ ಆರೋಪಿಗಳು ಬ್ಯಾಂಕ್‌ನ ಅಲಾರಂ ವ್ಯವಸ್ಥೆ ಹಾಗೂ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕವನ್ನು ಕಡಿತಗೊಳಿಸಿದ್ದರೆಂಬುದು ಬೆಳಕಿಗೆ ಬಂದಿತ್ತು.ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖಕ್ಕೆ ಮಾಸ್ಕ್ ಹಾಗೂ ಕೈಗಳಿಗೆ ಗ್ಲೌಸ್ ಧರಿಸಿದ್ದ ವ್ಯಕ್ತಿಯ ಅಲ್ಪಾವಧಿಯ ಸಿಸಿಟಿವಿ ದೃಶ್ಯ ಮಾತ್ರ ಲಭ್ಯವಾಗಿದೆ. ಬ್ಯಾಂಕ್ ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಗಳು ಸ್ಪಷ್ಟವಾಗಿರದ ಕಾರಣ ಅಥವಾ ಸಮರ್ಪಕ ಮಾಹಿತಿಯನ್ನು ನೀಡದ ಕಾರಣ ಆರೋಪಿಗಳ ಗುರುತು ಪತ್ತೆ ಹಚ್ಚುವುದು ತನಿಖಾಧಿಕಾರಿಗಳಿಗೆ ಸವಾಲಾಗಿ ಪರಿಣಮಿಸಿದೆ.ಫರಂಗಿಪೇಟೆ ಬ್ಯಾಂಕ್ ಕಳ್ಳತನ ಯತ್ನ ಪ್ರಕರಣದ ತನಿಖೆ ಸಾಗುತ್ತಿದ್ದ ಸಂದರ್ಭದಲ್ಲೇ ಬಿ.ಸಿ.ರೋಡ್‌ನಲ್ಲಿ ಯುವತಿಯೊಬ್ಬಳ ಹತ್ಯೆ ಪ್ರಕರಣವೂ ನಡೆದಿದ್ದು, ಪೊಲೀಸರು ಎರಡೂ ಪ್ರಕರಣಗಳ ತನಿಖೆಯನ್ನು ಏಕಕಾಲದಲ್ಲಿ ಮುಂದುವರಿಸುತ್ತಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್‌ನಲ್ಲಿ 2 ಚಿನ್ನ ಸೇರಿ ನಾಲ್ಕು ಪದಕ ಗೆದ್ದು ಮಿಂಚಿನ ಹೇಮಚಂದ್ರ ಬಬ್ಬುಕಟ್ಟೆ

July 22, 2026

ತೆಲುಗು ನೆಲದಲ್ಲಿ ತುಳು ಕವಿತೆಯ ಸೊಬಗು: ಸಾವಿರಾರು ಸಾಹಿತ್ಯಾಭಿಮಾನಿಗಳ ಕರತಾಡನಕ್ಕೆ ಪಾತ್ರರಾದ ದಿವ್ಯಾ ಗಟ್ಟಿ ಪರಕ್ಕಿಲ

July 22, 2026

ಉಡುಪಿ: ಭೀಕರ ಅಪಘಾತ ಪ್ರಕರಣ- 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನ ಬಂಧಿಸಿದ ಪಡುಬಿದ್ರಿ ಪೊಲೀಸರು

July 22, 2026

Comments are closed.

Advertise
ಸಂಪರ್ಕಿಸಿ

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026
suddi

ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್‌ನಲ್ಲಿ 2 ಚಿನ್ನ ಸೇರಿ ನಾಲ್ಕು ಪದಕ ಗೆದ್ದು ಮಿಂಚಿನ ಹೇಮಚಂದ್ರ ಬಬ್ಬುಕಟ್ಟೆ

By UllalaVaniJuly 22, 20260

ಉಳ್ಳಾಲ, ಜು. 22: ಮಹಾರಾಷ್ಟ್ರದ ಛತ್ರಪತಿ ಸಾಂಬಾಜಿ ನಗರದ ಗರ್ಕಡೆ ಸ್ಟೇಡಿಯಂನಲ್ಲಿ ಜುಲೈ 18ರಿಂದ 24ರವರೆಗೆ ನಡೆಯುತ್ತಿರುವ ರಾಷ್ಟ್ರಮಟ್ಟದ ಮಾಸ್ಟರ್ಸ್…

ತೆಲುಗು ನೆಲದಲ್ಲಿ ತುಳು ಕವಿತೆಯ ಸೊಬಗು: ಸಾವಿರಾರು ಸಾಹಿತ್ಯಾಭಿಮಾನಿಗಳ ಕರತಾಡನಕ್ಕೆ ಪಾತ್ರರಾದ ದಿವ್ಯಾ ಗಟ್ಟಿ ಪರಕ್ಕಿಲ

July 22, 2026

ಉಡುಪಿ: ಭೀಕರ ಅಪಘಾತ ಪ್ರಕರಣ- 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನ ಬಂಧಿಸಿದ ಪಡುಬಿದ್ರಿ ಪೊಲೀಸರು

July 22, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026
1 2 3 … 2,029 Next
Automatic YouTube Gallery

ಮುಡಿಪು ಆಡಿಟೋರಿಯಂನಲ್ಲಿ ವಿಶೇಷ ಮೇಳ- ಸಂಪೂರ್ಣ ಮಾಹಿತಿ ಇಲ್ಲಿದೆ

ಮುಡಿಪುವಿನಲ್ಲಿ ಜುಲೈ 24-26ರವರೆಗೆ ಹಲಸು ಮೇಳ-2026-ಆಟಿ ಆಹಾರೋತ್ಸವ; ಕೆಂಪು, ಬಿಳಿ, ಬಂಗಾರ ವರ್ಣದ ಹಲಸು ಪ್ರದರ್ಶನ-ಮಾರಾಟ

ಹೂವು-ಹಣ್ಣಿನ ಸಸ್ಯಗಳ ಮೇಳವೂ ಜೊತೆಯಲ್ಲಿ,,,,,

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮುಡಿಪು ಆಡಿಟೋರಿಯಂನಲ್ಲಿ ವಿಶೇಷ ಮೇಳ- ಸಂಪೂರ್ಣ ಮಾಹಿತಿ ಇಲ್ಲಿದೆ
Now Playing
ಮುಡಿಪು ಆಡಿಟೋರಿಯಂನಲ್ಲಿ ವಿಶೇಷ ಮೇಳ- ಸಂಪೂರ್ಣ ಮಾಹಿತಿ ಇಲ್ಲಿದೆ
ಮುಡಿಪುವಿನಲ್ಲಿ ಜುಲೈ 24-26ರವರೆಗೆ ಹಲಸು ಮೇಳ-2026-ಆಟಿ ಆಹಾರೋತ್ಸವ; ಕೆಂಪು, ...
ಮುಡಿಪುವಿನಲ್ಲಿ ಜುಲೈ 24-26ರವರೆಗೆ ಹಲಸು ಮೇಳ-2026-ಆಟಿ ಆಹಾರೋತ್ಸವ; ಕೆಂಪು, ಬಿಳಿ, ಬಂಗಾರ ವರ್ಣದ ಹಲಸು ಪ್ರದರ್ಶನ-ಮಾರಾಟ

ಹೂವು-ಹಣ್ಣಿನ ಸಸ್ಯಗಳ ಮೇಳವೂ ಜೊತೆಯಲ್ಲಿ,,,,,

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಬಗಂಬಿಲ ಶ್ರೀ ಗೌರಿ ಗಣೇಶ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
Now Playing
ಬಗಂಬಿಲ ಶ್ರೀ ಗೌರಿ ಗಣೇಶ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಬಗಂಬಿಲ ಶ್ರೀ ಗೌರಿ ಗಣೇಶ ಉತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ; ನವೀನ್ ಡಿ ಪಡೀಲ್ ...
ಬಗಂಬಿಲ ಶ್ರೀ ಗೌರಿ ಗಣೇಶ ಉತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ; ನವೀನ್ ಡಿ ಪಡೀಲ್ ಲೋಕಾರ್ಪಣೆ; ಸಮಾಜದ ಏಕತೆಗೆ ಕರೆ

ಬಗಂಬಿಲ ಸತ್ಯನಾರಾಯಣ ಮಂದಿರ ಯೂಟ್ಯೂಬ್ ಚಾನೆಲ್ ಲೋಕಾರ್ಪಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version