ಉಳ್ಳಾಲ, ಜು.24: ಮುಡಿಪು ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.

ಮೃತರನ್ನು ಅಳೇಕಲ ನಿವಾಸಿ ಅಬ್ದುಲ್ ಖಾದರ್ (66) ಎಂದು ಗುರುತಿಸಲಾಗಿದೆ.
ಗುರುವಾರ ಸಂಜೆ ಅಬ್ದುಲ್ ಖಾದರ್ ಅವರು ಮುಡಿಪು ಬಳಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಅವರಿಗೆ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ಕಾರು ಚಾಲಕ ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದನು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಅದೇ ದಿನ ರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಸಂತಾಪ
ಅಬ್ದುಲ್ ಖಾದರ್ ಅವರ ನಿಧನಕ್ಕೆ ಕಾಂಗ್ರೆಸ್ ರಾಜ್ಯ ಸಮಿತಿ ಸಂಯೋಜಕ ಫಾರೂಕ್ ಉಳ್ಳಾಲ್, ಕಾಂಗ್ರೆಸ್ ಮುಖಂಡ ಮುಸ್ತಫಾ ಅಬ್ದುಲ್ಲಾ, ಉಳ್ಳಾಲ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಜಾಫರ್ ಯು.ಎನ್., ಹಾಗೂ ಉಳ್ಳಾಲ ನಗರಸಭೆಯ ಮಾಜಿ ಅಧ್ಯಕ್ಷ ಯು.ಎ. ಇಸ್ಮಾಯಿಲ್

