ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ ಕಾರಣ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಆರಂಭವಾದ ಅಭಿಯಾನದಲ್ಲಿ ಪ್ರಧಾನ್ ಅವರ ರಾಜೀನಾಮೆ ಪ್ರಮುಖ ಆಗ್ರಹವಾಗಿತ್ತು. ರಾಜೀನಾಮೆ ನೀಡದ ಹೊರತು ಯಾವುದೇ ಮಾತುಕತೆಗೆ ಸಿದ್ದವಿಲ್ಲ ಎಂದು ಹೇಳಿತ್ತು. ವಿಪಕ್ಷಗಳೂ ಪ್ರಧಾನ್ ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದವು.

