ನವದೆಹಲಿ, ಜು. 25 : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಿಜಯೋತ್ಸವ ಆಚರಿಸಿದೆ. ‘ವಿದ್ಯಾರ್ಥಿಗಳ ಶಕ್ತಿ ಚಿರಾಯುವಾಗಲಿ’ ಎಂದು ಸಿಜೆಪಿ ಪೋಸ್ಟ್ ಶೇರ್ ಮಾಡಿದೆ.
ಸಿಜೆಪಿಯ ಸದಸ್ಯರು, ನೀಟ್-ಯುಜಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಹಲವು ದಿನಗಳಿಂದ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಜೂನ್‌ನಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದಾರೆ.ಕೊನೆಗೂ ಸಿಜೆಪಿ ಹಾಗೂ ಪ್ರತಿಭಟನಾಕಾರರ ಬೇಡಿಕೆಗೆ ಮಣಿದಿರುವ ಕೇಂದ್ರ ಸರ್ಕಾರ ಧರ್ಮೇಂದ್ರ ಪ್ರಧಾನ್ ಅವರಿಂದ ರಾಜೀನಾಮೆ ಪಡೆದಿದೆ. ಈ ಮೂಲಕ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವವರ ಬೇಡಿಕೆ ಈಡೇರಿದಂತಾಗಿದೆ.