Site icon Ullalavani

ಕಾಸರಗೋಡು: ಮಾದಕ ವಸ್ತು ಸಾಗಾಟ ಪ್ರಕರಣ; ಆರೋಪಿಯ ಬಂಧನ..!

ಕಾಸರಗೋಡು, ಜು. 25 : ಕಾಸರಗೋಡು ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ ಹಾಗೂ ಮಾರಾಟಕ್ಕೆ ಸಂಬಂಧಿಸಿದ ಹಲವು ಪ್ರಕರಣಗಳ ಆರೋಪಿಯೋರ್ವನನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಚೆಂಗಳ ಸಮೀಪದ ಫೋರ್ಥ್ ಮೈಲ್ ನಿವಾಸಿ ಮೊಹಮ್ಮದ್ ಅಬೂಬಕ್ಕರ್ ಎಂದು ಗುರುತಿಸಲಾಗಿದೆ.ಪೊಲೀಸರ ಮಾಹಿತಿ ಪ್ರಕಾರ, ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿಯ ವಿರುದ್ಧ ಮಾದಕ ವಸ್ತು ಸಾಗಾಟಕ್ಕೆ ಸಂಬಂಧಿಸಿದ ಅನೇಕ ಪ್ರಕರಣಗಳು ದಾಖಲಾಗಿವೆ.ವಿದ್ಯಾನಗರ, ಮೆಲ್ಪರಂಬ ಹಾಗೂ ಅಡೂರು ಪೊಲೀಸ್ ಠಾಣೆಗಳಲ್ಲಿ ಆರೋಪಿಯ ವಿರುದ್ಧ ಮಾದಕ ದ್ರವ್ಯ ಮತ್ತು ಎನ್‌ಡಿಪಿಎಸ್ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Exit mobile version