Site icon Ullalavani

ಗುತ್ತಿಗೆದಾರರ ಸಂಘದ ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷರಾಗಿ ನಿಸಾರ್ ಟಿ.ಎಸ್. ಆಯ್ಕೆ

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲಾ ಲೋಕೋಪಯೋಗಿ ಇಲಾಖೆ ಗುತ್ತಿಗೆದಾರರ ಸಂಘದ ಉಳ್ಳಾಲ ತಾಲೂಕು ಘಟಕದ ನೂತನ ಸಮಿತಿಯನ್ನು ಇತ್ತೀಚೆಗೆ ಕುತ್ತಾರ್‌ನ ಖಾಸಗಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ರಚಿಸಲಾಯಿತು.

ಜಿಲ್ಲಾ ಕಾರ್ಯದರ್ಶಿ ಕೆ.ಕೆ. ನಾಸೀರ್ ಅಧ್ಯಕ್ಷತೆ ವಹಿಸಿದ್ದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷರಾಗಿ ಮಂಗಳೂರು ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ನಿಸಾರ್ ಟಿ.ಎಸ್. ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಕೈಲಾಸ್ ಬಾಬು ಹಾಗೂ ಶಂಶುದ್ದೀನ್ ಹರೇಕಳ, ಪ್ರಧಾನ ಕಾರ್ಯದರ್ಶಿಯಾಗಿ ಅಹ್ಮದ್ ಶಹೀರ್, ಜಂಟಿ ಕಾರ್ಯದರ್ಶಿಯಾಗಿ ಎಲ್ರಿನ್ ಹಾಗೂ ಕೋಶಾಧಿಕಾರಿಯಾಗಿ ಹನೀಫ್ ಶೈನ್ ಆಯ್ಕೆಯಾದರು.

ಇದಲ್ಲದೆ, 11 ಮಂದಿ ಸದಸ್ಯರನ್ನು ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಯಿತು.

Exit mobile version