ಮಂಗಳೂರು, ಜು. 31 :16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026 ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುತ್ತಿರುವ 16ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳವು ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್‌ನ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ.

16ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ 2026ರಲ್ಲಿ ಐಟಿ, ಐಟಿಐಎಸ್, ಉತ್ಪಾದನಾ ವಲಯ, ಆರೋಗ್ಯ ಮತ್ತು ಔಷಧ, ಬ್ಯಾಂಕಿಂಗ್ ಮತ್ತು ಹಣಕಾಸು, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆತಿಥ್ಯ, ಮಾಧ್ಯಮ, ಎಲೆಕ್ಟ್ರಾನಿಕ್ಸ್, ದೂರಸಂಪರ್ಕ ಹಾಗೂ ನಿರ್ಮಾಣ ಕ್ಷೇತ್ರಗಳ 320 ಕಂಪನಿಗಳು ನೋಂದಾಯಿಸಿಕೊಂಡಿದ್ದು, 350ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು.2026ರ ಶೈಕ್ಷಣಿಕ ವರ್ಷದಲ್ಲಿ ಅಥವಾ ಅದಕ್ಕೂ ಮೊದಲು ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು, ಎಸ್ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್, ನರ್ಸಿಂಗ್, ವೈದ್ಯಕೀಯ, ಪ್ಯಾರಾ ಮೆಡಿಕಲ್, ಬಿಬಿಎ, ಎಂಬಿಎ ಸೇರಿದಂತೆ ಎಲ್ಲ ವಿಭಾಗದವರು ಭಾಗವಹಿಸಬಹುದು. ಹೊರ ಜಿಲ್ಲೆಗಳಿಂದ ಬರುವ ಅಭ್ಯರ್ಥಿಗಳಿಗೆ ಆ.6ರಂದು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಕಾಪು, ಬ್ರಹ್ಮಾವರ, ಬೈಂದೂರು, ಬಂಟ್ವಾಳ, ಪುತ್ತೂರು ಹಾಗೂ ಸುಬ್ರಹ್ಮಣ್ಯದಲ್ಲಿ ವಿಶೇಷ ಓರಿಯೆಂಟೇಶನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಈವರೆಗೆ 40,848 ಮಂದಿ ಸ್ಥಳದಲ್ಲೇ ಉದ್ಯೋಗ ಪಡೆದು ವೃತ್ತಿಜೀವನಕ್ಕೆ ಭದ್ರ ಅಡಿಪಾಯ ಹಾಕಿಕೊಂಡಿದ್ದಾರೆ. 66,432 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ ಮುಂದಿನ ಹಂತದ ಆಯ್ಕೆಯಾಗಿದ್ದಾರೆ. ಮಾಹಿತಿಗೆ www.alvaspragati.com ಅಥವಾ ಮೊಬೈಲ್ ಫೋನ್ ಸಂಖ್ಯೆ 9611750531 / 9741440490 ಅನ್ನು ಸಂಪರ್ಕಿಸಬಹುದು. ಆನ್‌ಲೈನ್ ನೋಂದಣಿ ಕಡ್ಡಾಯವಾಗಿದ್ದು, https://alvaspragati.com/candidate-registration ಈ ತಾಣದಲ್ಲಿ ನೋಂದಾಯಿಸಿಕೊಳ್ಳಬಹುದು ಎಂದರು.ಪತ್ರಿಕಾಗೋಷ್ಠಿಯಲ್ಲಿ ವಿವೇಕ ಆಳ್ವ, ಟ್ರಸ್ಟಿಗಳು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.), ಮೂಡುಬಿದಿರೆ, ಪ್ರಸಾದ ಶೆಟ್ಟಿ, ಮುಖ್ಯಸ್ಥರು, ಪತ್ರಿಕೋದ್ಯಮ ವಿಭಾಗ, ಆಳ್ವಾಸ್ ಸ್ವಾಯತ್ತಾ ಕಾಲೇಜು, ಕುಮಾರಿ ರಂಜಿತಾ ಆಚರ‍್ಯ, ಮುಖ್ಯಸ್ಥರು, ಪ್ಲೇಸ್‌ಮೆಂಟ್ ವಿಭಾಗ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.), ಮೂಡುಬಿದಿರೆ ಭಾಗವಹಿಸಿದರು.

