Site icon Ullalavani

ಜೈಲಿಂದ ಬಿಡುಗಡೆಗೊಂಡ ಕೂಡಲೇ ಸಿಎಂ ಡಿ ಕೆ ಶಿವಕುಮಾರ್ ಭೇಟಿ ಮಾಡಿದ ವಿನಯ್ ಕುಲಕರ್ಣಿ

ಬೆಂಗಳೂರು, ಆ. 01 : ಜೈಲಿನಿಂದ ಬಿಡುಗಡೆಯಾದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಕುಟುಂಬ ಸಮೇತರಾಗಿ ಸಿಎಂ ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದಾರೆ.

ಈ ವೇಳೆ ಅವರು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ಸಿಎಂ ಜೊತೆಗೆ ಏನು ಚರ್ಚೆ ಮಾಡಿಲ್ಲ. ಮುಂದೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್‌ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ತಡೆ ನೀಡಿ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ವಿನಯ್‌ ಕುಲಕರ್ಣಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.ಶುಕ್ರವಾರ ರಾತ್ರಿ ಜೈಲಿನಿಂದ ಹೊರಬಂದ ವಿನಯ್ ಕುಲಕರ್ಣಿ ಮಾಧ್ಯಮಗಳೊಂದಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ನೇರವಾಗಿ ವಾಹನದಲ್ಲಿ ತೆರಳಿದರು. ಈ ವೇಳೆ ಜೈಲು ಹೊರಗೆ ಸೇರಿದ್ದ ಅಭಿಮಾನಿಗಳು ಅವರಿಗೆ ಹೂವಿನ ಹಾರ ಹಾಕಿ ಸ್ವಾಗತ ಕೋರಿದರು. ಕೆಲ ಅಭಿಮಾನಿಗಳೊಂದಿಗೆ ಶೇಕ್‌ಹ್ಯಾಂಡ್ ಮಾಡಿ ಅವರು ಅಲ್ಲಿಂದ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದತ್ತ ತೆರಳಿದ್ದರು.ಯೋಗೇಶ್‌ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವಿನಯ್ ಕುಲಕರ್ಣಿ, ತಮ್ಮ ಶಿಕ್ಷೆಗೆ ತಡೆ ನೀಡುವಂತೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿ ಇಂದು ಜಾಮೀನು ಮಂಜೂರು ಮಾಡಿದೆ. ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 10 ಆರೋಪಿಗಳಿಗೆ ಜಾಮೀನು ನೀಡಲಾಗಿದೆ.

Exit mobile version