Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
KARNATAKA

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ರಾಜೀನಾಮೆ ಎಚ್ಚರಿಕೆ, ಬೆಂಬಲಿಗರ ಪ್ರತಿಭಟನೆ

UllalaVaniBy UllalaVaniAugust 4, 2026No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಬೆಂಗಳೂರು, ಆಗಸ್ಟ್ 4: ಮುಖ್ಯಮಂತ್ರಿ ಡಿಕೆ ಶಿವಕುಮಾರ್  ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ  ನಡೆದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಕಿಚ್ಚು ಹೊತ್ತಿಕೊಂಡಿದೆ. ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದು ಅದು ಹುಸಿಯಾದ ಬೆನ್ನಲ್ಲೇ ಹಲವು ಶಾಸಕರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಕೆಲವರು ಶಾಸಕ ಸ್ಥಾನ ಹಾಗೂ ನಿಗಮ-ಮಂಡಳಿ ಸ್ಥಾನಕ್ಕೆ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ. ಮತ್ತೊಂದೆಡೆ, ಶಾಸಕರ ಬೆಂಬಲಿಗರು ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ವಿ. ಪಾಟೀಲ್, ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಾಮಾಣಿಕರು ಹಾಗೂ ಪಕ್ಷದ ನಿಷ್ಠಾವಂತರಿಗೆ ಇದು ಕಾಲವಲ್ಲ ಎಂದು ಅಸಮಾಧಾನ ಹೊರಹಾಕಿರುವ ಅವರು, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂಬುದು ತಿಳಿದುಬಂದಿದೆ.

ಇನ್ನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉದ್ದೇಶಪೂರ್ವಕವಾಗಿಯೇ ತಮಗೆ ಸಚಿವ ಸ್ಥಾನ ತಪ್ಪಿಸಲಾಗಿದೆ ಎಂದು ಆರೋಪಿಸಿರುವ ಅವರು, ಶಾಸಕ ಸ್ಥಾನ ಹಾಗೂ ನಿಗಮ-ಮಂಡಳಿ ಸ್ಥಾನಕ್ಕೆ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ.

ನಾರಾಯಣಸ್ವಾಮಿ, ನಂಜೇಗೌಡ, ಸಂಗಮೇಶ್ ಅಸಮಾಧಾನ

ಕೋಲಾರದ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಬೆಂಬಲಿಗ ಹರೀಶ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ ಸ್ಥಾನ ತಪ್ಪಿಸಿದ್ದಕ್ಕೆ ಕೆ.ಎಚ್. ಮುನಿಯಪ್ಪ ಅವರ ವಿರುದ್ಧವೂ ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದು, ಇದರ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮಾಲೂರು ಶಾಸಕ ಕೆ.ವೈ. ನಂಜೇಗೌಡ ಕೂಡ ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ಮತ್ತೊಂದೆಡೆ, ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಕೂಡ ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಬೆಂಬಲಿಗರೊಂದಿಗೆ ಚರ್ಚಿಸುವುದಾಗಿ ಹೇಳಿದ್ದಾರೆ. ಬಿಜೆಪಿ ಕಡೆಯಿಂದ ಆಮಿಷ ಬಂದಿದ್ದರೂ ತಾನು ಪಕ್ಷ ತೊರೆದಿಲ್ಲ ಎಂದು ಹೇಳಿರುವ ಅವರು, ಕ್ಷೇತ್ರದ ಜನರು ರಾಜೀನಾಮೆ ನೀಡುವಂತೆ ಒತ್ತಾಯಿಸಿದರೆ ಆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಹಿರಿಯ ಶಾಸಕ ಡಿ.ಜಿ. ಶಾಂತನಗೌಡ ಕೂಡ ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ಅಸಮಾಧಾನಗೊಂಡಿದ್ದಾರೆ. ಬೆಂಬಲಿಗರ ಸಭೆ ಕರೆದು ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ಅವರು ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ.

ಮಹದೇವಪ್ಪ ಬೆಂಬಲಿಗರಿಂದಲೂ ಒತ್ತಡ

ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರಿಗೆ ಸಚಿವ ಸ್ಥಾನ ನೀಡದಿರುವುದು ಅವರ ಬೆಂಬಲಿಗರಲ್ಲೂ ಅಸಮಾಧಾನ ಮೂಡಿಸಿದೆ. ಮಹದೇವಪ್ಪ ಅವರ ಪುತ್ರ ಹಾಗೂ ಸಂಸದ ಸುನಿಲ್ ಬೋಸ್ ಅವರಿಗೆ ರಾಜೀನಾಮೆ ನೀಡುವಂತೆ ಬೆಂಬಲಿಗರು ಹಾಗೂ ಕಾರ್ಯಕರ್ತರು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ ಪಕ್ಷದೊಳಗಿನ ಅಸಮಾಧಾನ ಮತ್ತಷ್ಟು ಬಹಿರಂಗವಾಗಿದೆ.

ಭಾವೋದ್ವೇಗದಿಂದ ನಿರ್ಧಾರ ಕೈಗೊಳ್ಳಬೇಡಿ: ಹರಿಪ್ರಸಾದ್ ಮನವಿ

ಈ ನಡುವೆ, ಸಚಿವ ಸ್ಥಾನ ಸಿಗದಿರುವುದಕ್ಕೆ ಶಾಸಕರು ಭಾವೋದ್ವೇಗದಿಂದ ರಾಜೀನಾಮೆಯಂತಹ ನಿರ್ಧಾರ ಕೈಗೊಳ್ಳಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮನವಿ ಮಾಡಿದ್ದಾರೆ. ಅಸಮಾಧಾನಗೊಂಡಿರುವ ಶಾಸಕರೊಂದಿಗೆ ವೈಯಕ್ತಿಕವಾಗಿ ಮಾತನಾಡಿ, ಅವರ ನೋವು ಮತ್ತು ಅಭಿಪ್ರಾಯಗಳನ್ನು ಹೈಕಮಾಂಡ್ ಗಮನಕ್ಕೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮೈಸೂರಿನಲ್ಲಿ ತನ್ವೀರ್ ಸೇಠ್ ಬೆಂಬಲಿಗರ ಪ್ರತಿಭಟನೆ

ಹಿರಿಯ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡದಿರುವುದು ಮೈಸೂರಿನಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದು, ಟೌನ್‌ಹಾಲ್ ಸುತ್ತಮುತ್ತಲೂ ಆಕ್ರೋಶ ವ್ಯಕ್ತವಾಗಿದೆ. ಪ್ರತಿಭಟನೆ ವೇಳೆ ತನ್ವೀರ್ ಸೇಠ್ ಅವರ ಬೆಂಬಲಿಗ ತಬ್ರೇಜ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಲ್ಲೂ ಸಚಿವ ಸ್ಥಾನ ವಂಚಿತ ಶಾಸಕರ ಬೆಂಬಲಿಗರಿಂದ ಪ್ರತಿಭಟನೆಗಳು ನಡೆದಿವೆ. ವಿಜಯನಗರ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಹಾಗೂ ಗೋವಿಂದರಾಜನಗರ ಕ್ಷೇತ್ರದ ಶಾಸಕ ಪ್ರಿಯಕೃಷ್ಣ ಅವರ ಬೆಂಬಲಿಗರು ಇಬ್ಬರಿಗೂ ಸಚಿವ ಸ್ಥಾನ ಸಿಗದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗರಬಾವಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ ಬೆಂಬಲಿಗರು, ಟೋಲ್‌ಗೇಟ್ ಸರ್ಕಲ್‌ನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಫೋಟೋ ದಹಿಸಿ ಆಕ್ರೋಶ ಹೊರಹಾಕಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲೂ ಶಾಸಕ ಅಶೋಕ ಪಟ್ಟಣ ಅವರಿಗೆ ಸಚಿವ ಸ್ಥಾನ ಸಿಗದಿರುವುದನ್ನು ಖಂಡಿಸಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಶಾಸಕ ನಾಡಗೌಡ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರೆ, ಮುಧೋಳದಲ್ಲಿ ಶಾಸಕ ಆರ್.ಬಿ. ತಿಮ್ಮಾಪುರ ಅವರ ಬೆಂಬಲಿಗರು ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದಲ್ಲೂ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಬಾಗೇಪಲ್ಲಿಯಲ್ಲಿ ಮೂರು ತಾಲೂಕು ಬಂದ್‌ಗೆ ಕರೆ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿವಿಜಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿರುವ ಬೆಂಬಲಿಗರು, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕುಗಳಲ್ಲಿ ಬಂದ್ ನಡೆಸಲು ನಿರ್ಧರಿಸಿದ್ದಾರೆ.

ಹೀಗೆ ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಸರಣಿ ಮುಂದುವರಿದಿದ್ದು, ಹಲವು ಶಾಸಕರು ಬಹಿರಂಗವಾಗಿ ಅಸಮಾಧಾನ ಹೊರಹಾಕುತ್ತಿದ್ದಾರೆ. ಬೆಂಬಲಿಗರ ಪ್ರತಿಭಟನೆ, ರಾಜೀನಾಮೆ ಎಚ್ಚರಿಕೆ ಹಾಗೂ ನಾಯಕರ ನಡುವಿನ ಆರೋಪ-ಪ್ರತ್ಯಾರೋಪಗಳು ಪಕ್ಷದ ನಾಯಕತ್ವಕ್ಕೆ ಹೊಸ ಸವಾಲು ತಂದಿವೆ. ಈ ಅಸಮಾಧಾನವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಹೇಗೆ ಶಮನಗೊಳಿಸಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸರಕಾರದ ಸವಲತ್ತುಗಳನ್ನ ಜನಸಾಮಾನ್ಯರಿಗೆ ತಲುಪಿಸುವುದೇ ಮೊದಲ ಆದ್ಯತೆಯಾಗಿರಲಿ; ಸಚಿವ ಯು.ಟಿ.ಖಾದರ್

August 4, 2026

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

August 4, 2026

ಬಾಳೆಪುಣಿ: ಅನಧಿಕೃತವಾಗಿ ನಿರ್ಮಾಣಗೊಡ ಗುಡಿಸಲುಗಳ ತೆರವು

August 4, 2026

Comments are closed.

Advertise
ಸಂಪರ್ಕಿಸಿ

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026
suddi

ಸರಕಾರದ ಸವಲತ್ತುಗಳನ್ನ ಜನಸಾಮಾನ್ಯರಿಗೆ ತಲುಪಿಸುವುದೇ ಮೊದಲ ಆದ್ಯತೆಯಾಗಿರಲಿ; ಸಚಿವ ಯು.ಟಿ.ಖಾದರ್

By UllalaVaniAugust 4, 20260

ಉಳ್ಳಾಲ;ಸರಕಾರದಿಂದ ಸಿಗುವ ಸವಲತ್ತುಗಳನ್ನ ಜನಸಾಮಾನ್ಯರಿಗೆ ತಲುಪಿಸುವುದೇ ಸ್ಥಳೀಯಾಡಳಿತಗಳ ಮೊದಲ ಆದ್ಯತೆಯಾಗಿರಬೇಕು.ಸವಲತ್ತುಗಳನ್ನ ಪಡೆದುಕೊಂಡಿರುವವರು ಸ್ವಾವಲಂಬನೆ‌ಯ ಬದುಕು ಕಟ್ಟಬೇಕಿದೆ.ಜನಪ್ರತಿನಿಧಿಗಳು ಅಥವಾ ಅಧಿಕಾರಿಗಳಿಂದ‌ ಜನರ…

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ವಿತರಿಸಿ ಅಭಿನಂದಿಸಿದ ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾದ್ ವರ್ಕಾಡಿ

August 4, 2026

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ರಾಜೀನಾಮೆ ಎಚ್ಚರಿಕೆ, ಬೆಂಬಲಿಗರ ಪ್ರತಿಭಟನೆ

August 4, 2026

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

August 4, 2026
1 2 3 … 2,044 Next
Automatic YouTube Gallery

ಆ.9ರಂದು ಪಿಲಾರು ಬೈಲುಗದ್ದೆಯಲ್ಲಿ ಕೆಸರು ಗದ್ದೆಯ ಕ್ರೀಡಾಕೂಟಗಳು

ಆ.9ರಂದು ಕೆಸರು ಗದ್ದೆಯ ಕ್ರೀಡಾಕೂಟಗಳು ;ಪಿಲಾರು ಬೈಲುಗದ್ದೆಯಲ್ಲಿ ಆಯೋಜನೆ

ವಿಜೇತರಾದವರಿಗೆ ಬಹುಮಾನ ವಿತರಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆ.9ರಂದು ಪಿಲಾರು ಬೈಲುಗದ್ದೆಯಲ್ಲಿ ಕೆಸರು ಗದ್ದೆಯ ಕ್ರೀಡಾಕೂಟಗಳು
Now Playing
ಆ.9ರಂದು ಪಿಲಾರು ಬೈಲುಗದ್ದೆಯಲ್ಲಿ ಕೆಸರು ಗದ್ದೆಯ ಕ್ರೀಡಾಕೂಟಗಳು
ಆ.9ರಂದು ಕೆಸರು ಗದ್ದೆಯ ಕ್ರೀಡಾಕೂಟಗಳು ;ಪಿಲಾರು ಬೈಲುಗದ್ದೆಯಲ್ಲಿ ಆಯೋಜನೆ ...
ಆ.9ರಂದು ಕೆಸರು ಗದ್ದೆಯ ಕ್ರೀಡಾಕೂಟಗಳು ;ಪಿಲಾರು ಬೈಲುಗದ್ದೆಯಲ್ಲಿ ಆಯೋಜನೆ

ವಿಜೇತರಾದವರಿಗೆ ಬಹುಮಾನ ವಿತರಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೆರೆಬೈಲ್: ಆಟಿಡೊಂಜಿ ಅಯ್ತಾರ ಮಾತೃಭೋಜನ ಕಾರ್ಯಕ್ರಮ
Now Playing
ಕೆರೆಬೈಲ್: ಆಟಿಡೊಂಜಿ ಅಯ್ತಾರ ಮಾತೃಭೋಜನ ಕಾರ್ಯಕ್ರಮ
ಶ್ರೀ ನಾಗರಕ್ತೇಶ್ವರಿ ಧರ್ಮಶಿಕ್ಷಣ ಕೇಂದ್ರದ ಆಶ್ರಯದಲ್ಲಿ ಆಟಿಡೊಂಜಿ ಅಯ್ತಾರ ...
ಶ್ರೀ ನಾಗರಕ್ತೇಶ್ವರಿ ಧರ್ಮಶಿಕ್ಷಣ ಕೇಂದ್ರದ ಆಶ್ರಯದಲ್ಲಿ ಆಟಿಡೊಂಜಿ ಅಯ್ತಾರ ಮಾತೃಭೋಜನ ಕಾರ್ಯಕ್ರಮ;ವಿಶೇಷ ಗಮನಸೆಳೆದ `ಆಟಿಕಳೆಂಜ ಪ್ರದರ್ಶನ'

ಬಗೆಬಗೆಯ ಆಟಿ ವಿಶೇಷ ಖಾದ್ಯಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version