ಉಳ್ಳಾಲ;ಸರಕಾರದಿಂದ ಸಿಗುವ ಸವಲತ್ತುಗಳನ್ನ ಜನಸಾಮಾನ್ಯರಿಗೆ ತಲುಪಿಸುವುದೇ ಸ್ಥಳೀಯಾಡಳಿತಗಳ ಮೊದಲ ಆದ್ಯತೆಯಾಗಿರಬೇಕು.ಸವಲತ್ತುಗಳನ್ನ ಪಡೆದುಕೊಂಡಿರುವವರು ಸ್ವಾವಲಂಬನೆಯ ಬದುಕು ಕಟ್ಟಬೇಕಿದೆ.ಜನಪ್ರತಿನಿಧಿಗಳು ಅಥವಾ ಅಧಿಕಾರಿಗಳಿಂದ ಜನರ ಎಲ್ಲಾ ಸಮಸ್ಯೆಗಳನ್ನ ಪರಿಹರಿಸಲು ಸಾಧ್ಯವಿಲ್ಲ.ಮಕ್ಕಳಿಗೆ ಉತ್ತಮ ಶಿಕ್ಷಣ ಕೊಟ್ಟರೆ ಮಾತ್ರ ನಿಮ್ಮ ಮನೆಯ ಎಲ್ಲಾ ಸಮಸ್ಯೆಗಳು ಶಮನವಾಗಲು ಸಾಧ್ಯವಿದೆಯೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ.ಖಾದರ್ ಹೇಳಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶ,ಉಳ್ಳಾಲ ನಗರಸಭೆ,ಸೋಮೇಶ್ವರ ಪುರಸಭೆ,ಕೋಟೆಕಾರು ಪಟ್ಟಣ ಪಂಚಾಯತ್ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಂಯುಕ್ತ ಆಶ್ರಯದಲ್ಲಿ ಸೋಮೇಶ್ವರ ಉಚ್ಚಿಲದ ಖಾಸಗಿ ಸಭಾಂಗಣದಲ್ಲಿ ಗುರುವಾರ ನಡೆದ ಅಮೃತ್ ನಗರೋತ್ಥಾನ (ಮುನಿಸಿಪಾಲಿಟಿ) ಹಂತ-4 ಯೋಜನೆ ಹಾಗೂ ದೇವರಾಜ ಅರಸು ನಿಗಮದ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಸರಕಾರದಿಂದ ಸಿಗುವ ವಿವಿಧ ಸವಲತ್ತುಗಳಿಗೆ ಅರ್ಜಿ ಹಾಕಿದವರಿಗೆ ಮುಂದಿನ ದಿನಗಳಲ್ಲಿ ನಡೆಯಲಿರುವ ಹೋಬಳಿ ಮಟ್ಟದ ಜನಸಂಪರ್ಕ ಸಭೆಯಲ್ಲಿ ಸವಲತ್ತುಗಳನ್ನ ವಿತರಿಸಲಾಗುವುದೆಂದು ಹೇಳಿದರು.
ಸೋಮೇಶ್ವರ ಪುರಸಭಾ ಅಧ್ಯಕ್ಷೆ ಕಮಲ ಅಧ್ಯಕ್ಷತೆ ವಹಿಸಿದ್ದರು.ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ,ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಸುರೇಶ್ ಭಟ್ನಗರ,ಮೂಡ ಅಧ್ಯಕ್ಷರಾದ ಸದಾಶಿವ ಉಳ್ಳಾಲ್,ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ,ಕೋಟೆಕಾರು ಪಟ್ಟಣ ಪಂಚಾಯತ್ ಅಧ್ಯಕ್ಷರಾದ ದಿವ್ಯಾ ಶೆಟ್ಟಿ,ಉಪಾಧ್ಯಕ್ಷರಾದ ಪ್ರವೀಣ್ ಬಗಂಬಿಲ,ಸ್ಥಾಯಿ ಸಮಿತಿ ಅಧ್ಯಕ್ಷ ಧೀರಜ್ ಕುಸಾಲ್ ನಗರ,ಮುಖ್ಯಾಧಿಕಾರಿ ಮಾಲಿನಿ,ಕೆಎಸ್ ಆರ್ ಟಿಸಿ ಮಾಜಿ ಸದಸ್ಯ ರಮೇಶ್ ಶೆಟ್ಟಿ ಬೋಳಿಯಾರ್,ವಕ್ಫ್ ರಾಜ್ಯ ಸದಸ್ಯೆ ರಝಿಯಾ ಇಬ್ರಾಹಿಂ,ಜಿಲ್ಲಾ ನಗರಾಭಿವೃದ್ಧಿ ಕೋಶ ಕಾರ್ಯಪಾಲಕ ಅಭಿಯಂತರ ಪುರಂದರ್,ಸಹಾಯಕ ಕಾರ್ಯಪಾಲ ಅಭಿಯಂತರ ತೇಜೋಮೂರ್ತಿ,ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷೆ ಸುರೇಖಾ ಚಂದ್ರಹಾಸ್,ಸೋಮೇಶ್ವರ ಪುರಸಭಾ ಸದಸ್ಯರಾದ ಪುರುಷೋತ್ತಮ ಶೆಟ್ಟಿ ಪಿಲಾರ್,ಸಲಾಮ್ ಉಚ್ಚಿಲ,ದೇವರಾಜ ಅರಸು ಇಲಾಖೆಯ ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.
ಉಳ್ಳಾಲ ನಗರಸಭೆ ಪೌರಾಯುಕ್ತ ಸಂತೋಷ್ ಎಸ್.ಡಿ.ಸ್ವಾಗತಿಸಿದರು.ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಮತ್ತಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಮೋಹನ್ ಶಿರ್ಲಾಲ್ ನಿರೂಪಿಸಿದರು.

