ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ, ಯುವ ಕಾಂಗ್ರೆಸ್ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಹಾಗೂ ಯುವ ಕಾಂಗ್ರೆಸ್ ಗುರುಪುರ ಬ್ಲಾಕ್ ಸಮಿತಿ ವತಿಯಿಂದ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರ ಜನ್ಮದಿನದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಇಬ್ರಾಹಿಂ ನವಾಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ ಮತ್ತು ಹಸಿರು ಭಾರತ ನಿರ್ಮಾಣದ ಸಂದೇಶವನ್ನು ಸಾರುವ ಉದ್ದೇಶದಿಂದ ವಿವಿಧ ಜಾತಿಯ ಸಸಿಗಳನ್ನು ನೆಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ವೀಕ್ಷಕರು ಹಾಗೂ ಶಾಸಕರಾದ ಜಯಂತ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಯುವ ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಗಿರೀಶ್ ಅಲ್ವಾ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಬ್ ಕೋಟ್ಯಾನ್, ಯುವ ಕಾಂಗ್ರೆಸ್ ಗುರುಪುರ ಬ್ಲಾಕ್ ಅಧ್ಯಕ್ಷ ಮುಫೀದ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ತೌಫೀಕ್, ನಿಯಾಜ್ ಅಡ್ಡೂರು ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿ ಸಸಿ ನೆಟ್ಟು ಪರಿಸರ ಸಂರಕ್ಷಣೆ ಕುರಿತು ಸಂಕಲ್ಪ ಮಾಡಿದರು.
ಈ ಸಂದರ್ಭದಲ್ಲಿ ಪರಿಸರ ಉಳಿವಿಗಾಗಿ ಪ್ರತಿಯೊಬ್ಬರೂ ಮರಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕೆಂದು ನಾಯಕರು ಕರೆ ನೀಡಿದರು.