ಉಳ್ಳಾಲ: ಇಂದಿನ ಯುವ ಜನರು ತಂತ್ರಜ್ಞಾನದಲ್ಲಿ ಮುಂದಿದ್ದರೂ,ನಮ್ಮ ಸಂಸ್ಕೃತಿ,ಸಂಪ್ರದಾಯ ಹಾಗೂ ಜೀವನ ಮೌಲ್ಯಗಳ ಬಗ್ಗೆ ಅರಿವು ಬೆಳೆಸಿಕೊಳ್ಳುವುದು ಅನಿವಾರ್ಯವಾಗಿದೆ.ಯುವ ಪೀಳಿಗೆಯನ್ನು ದೇಶೀಯ ಸಂಸ್ಕೃತಿ,ಸಾಮಾಜಿಕ ಸೇವೆ ಹಾಗೂ ರಾಷ್ಟ್ರಭಕ್ತಿಯ ಚಟುವಟಿಕೆಗಳತ್ತ ಪ್ರೇರೇಪಿಸುವುದು ಪೋಷಕರ ಕರ್ತವ್ಯವಾಗಿದೆಯೆಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಮಂಜುಳಾ ರಾವ್ ಅಭಿಪ್ರಾಯಪಟ್ಟರು.

ಬಿಜೆಪಿ ಮಂಗಳೂರು ಮಂಡಲ ಮಹಿಳಾ ಮೋರ್ಚಾ ವತಿಯಿಂದ ಕೋಟೆಕಾರುವಿನ ಖಾಸಗಿ ಸಭಾಂಗಣದಲ್ಲಿ ಭಾನುವಾರ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರಗಳ ಅರಿವಿನ ಕೊರತೆ ಕಂಡುಬರುತ್ತಿದೆ.ನಮ್ಮ ಪರಂಪರೆ, ಸಂಸ್ಕೃತಿ ಹಾಗೂ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.ಮಕ್ಕಳಲ್ಲಿ ಬಾಲ್ಯದಿಂದಲೇ ಸಂಸ್ಕೃತಿಯ ಬಗ್ಗೆ ಆಸಕ್ತಿ ಹಾಗೂ ಅರಿವು ಮೂಡಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಅವರನ್ನು ಸಕ್ರಿಯವಾಗಿ ಭಾಗಿಯಾಗುವಂತೆ ಪ್ರೋತ್ಸಾಹಿಸಬೇಕೆಂದರು.
ರಾಜ್ಯ ಮಹಿಳಾ ಮೋರ್ಚಾದ ಕಾರ್ಯದರ್ಶಿ ಕುಮಾರಿ ಶ್ವೇತಾ ಪೂಜಾರಿಯವರು ಆಟಿ ತಿಂಗಳ ಬಗ್ಗೆ ಉಪನ್ಯಾಸ ನೀಡಿದರು.
ಮಂಗಳೂರು ಮಂಡಲ ಬಿಎಲ್ಒ ಜಯಶ್ರೀ ಕರ್ಕೇರ ಮತ್ತು ಪ್ರಗತಿಪರ ಕೃಷಿಕರಾದ ಮೀನಾಕ್ಷಿ ಸೀತಾರಾಮ ಶೆಟ್ಟಿ ಪಿಲಾರು ಮೇಗಿನ ಮನೆ ಅವರನ್ನು ಸನ್ಮಾನಿಸಲಾಯಿತು.
ಬಿಜೆಪಿ ಮಂಗಳೂರು ಮಂಡಲ ಮಹಿಳಾ ಮೋರ್ಚದ ಅಧ್ಯಕ್ಷರಾದ ಮಾಧವಿ ಉಳ್ಳಾಲ್ ಅಧ್ಯಕ್ಷತೆ ವಹಿಸಿದ್ದರು.ವಿದಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು,ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷರಾದ ಜಗದೀಶ್ ಆಳ್ವ ಕುವ್ವೆತ್ತಬೈಲ್,ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಪೂಜಾ ಪೈ,ಕಾರ್ಯದರ್ಶಿಗಳಾದ ಧನಲಕ್ಷ್ಮಿ ಗಟ್ಟಿ,ದಿನೇಶ್ ಅಮ್ಟೂರ್,ಜಿಲ್ಲಾ ಮಹಿಳಾ ಮೋರ್ಚಾ ಪ್ರ.ಕಾ ಲಕಿತ ಶೆಟ್ಟಿ,ಕಾರ್ಯದರ್ಶಿ ಸುಮಾ ಶೆಟ್ಟಿ,ಕೋಟೆಕಾರು ಪ.ಪಂ ಅಧ್ಯಕ್ಷೆ ದಿವ್ಯ ಶೆಟ್ಟಿ,ಮಂಡಲ ಪ್ರ.ಕಾ ದಯಾನಂದ ತೊಕ್ಕೊಟ್ಟು,ಪ್ರಮುಖರಾದ ದಿನಮಣಿ ರಾವ್,ಸುಮನಾ ಹರೀಶ್ ಶೆಟ್ಟಿ,ಸುರೇಖಾ ಮುನ್ನೂರು,ಪುರುಷೋತ್ತಮ ಗಟ್ಟಿ ಪರ್ಯತ್ತೂರು ಮೊದಲಾದವರು ಉಪಸ್ಥಿತರಿದ್ದರು.
ಮಹಿಳಾ ಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಸ್ವಪ್ನ ಶೆಟ್ಟಿ ಸ್ವಾಗತಿಸಿದರು.ಉಪಾಧ್ಯಕ್ಷರಾದ ಹೇಮಲತಾ ಭಂಡಾರಿ ನಿರೂಪಿಸಿ,ವಿನುತಾ ದೇವಾಡಿಗ ವಂದಿಸಿದರು.
ಆಟಿ ತಿಂಗಳಲ್ಲಿ ಸೇವಿಸುತ್ತಿದ್ದ ವಿಶೇಷ ಖಾದ್ಯಗಳಲ್ಲಿ ಔಷಧೀಯ ಗುಣಗಳಿದ್ದರಿಂದ ಹಿಂದಿನ ಪೀಳಿಗೆಯವರಿಗೆ ಮಾರಕ ರೋಗಗಳು ಭಾದಿಸುತ್ತಿರಲಿಲ್ಲ.ಇಂದು ಕೂಡು ಕುಟುಂಬಗಳು ವಿಘಟನೆಗೊಂಡಿದ್ದು ಮಕ್ಕಳಿಗೆ ನಮ್ಮ ಸಾಂಪ್ರದಾಯಿಕ ಖಾದ್ಯಗಳ ಪರಿಚಯವೇ ಇಲ್ಲದಂತಾಗಿ ,ಜಂಕ್ ಫುಡ್ ಗಳನ್ನೇ ತಿನ್ನುವ ಅನಿವಾರ್ಯ ಪರಿಸ್ಥಿತಿ ಒದಗಿದ ಪರಿಣಾಮ ಹದಿಹರೆಯದಲ್ಲೇ ವಿಭಿನ್ನ ಖಾಯಿಲೆಗಳು ಕಾಣಿಸಿಕೊಳ್ಳುವಂತಾಗಿದೆ.
ಮಾಧವಿ ಉಳ್ಳಾಲ್

