ಉಳ್ಳಾಲ, ಆ.4: ಭಾರತೀಯ ಮಾನಕ ಬ್ಯೂರೋ (BIS) ವತಿಯಿಂದ ಕೋಟೆಕಾರ್ ಪಟ್ಟಣ ಪಂಚಾಯತ್ ಸಹಯೋಗದಲ್ಲಿ ನಲ್ಮ್ (NULM) ಸ್ವಸಹಾಯ ಸಂಘಗಳ ಮಹಿಳೆಯರಿಗಾಗಿ ‘ಶೈನ್’ ಕುರಿತು ತರಬೇತಿ ಕಾರ್ಯಕ್ರಮ ಕೋಟೆಕಾರ್ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾ ಕೌಶಲ್ಯ ಮಿಷನ್‌ನ ಜಿಲ್ಲಾ ಅಭಿಯಾನ ವ್ಯವಸ್ಥಾಪಕಿ ಐರಿನ್ ರೆಬೆಲ್ಲೋ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮನೆಯಲ್ಲಿ ತಯಾರಿಸುವ ಆಹಾರದ ಗುಣಮಟ್ಟ, ಮಾನದಂಡಗಳು, ಆಹಾರ ಸುರಕ್ಷತೆ ಹಾಗೂ ಮಾಹಿತಿ ಯುಕ್ತ ಗ್ರಾಹಕ ಅಭ್ಯಾಸಗಳ ಕುರಿತು ತರಬೇತಿ ನೀಡಿದರು. ಜ್ಞಾನ ಮತ್ತು ಕೌಶಲ್ಯದ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸುವ ಅಗತ್ಯವನ್ನು ಅವರು ವಿವರಿಸಿದರು.
ಕೋಟೆಕಾರ್ ಪಟ್ಟಣ ಪಂಚಾಯತ್ ಅಧ್ಯಕ್ಷೆ ದಿವ್ಯ ಸತೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಪ್ರವೀಣ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನಲ್ಮ್ ಸ್ವಸಹಾಯ ಸಂಘಗಳ ಮಹಿಳೆಯರು ಭಾಗವಹಿಸಿ ತರಬೇತಿಯ ಪ್ರಯೋಜನ ಪಡೆದರು.